ETV Bharat / state

ಪತ್ನಿ ಕೊಲೆ ಕೇಸ್​.. ಮಗನ ಸಾಕ್ಷಿಯಿಂದ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಕೈದಿ ಜೈಲಿನ ಮಹಡಿಯಿಂದ ಬಿದ್ದು ಸಾವು! - ಜೈಲಿನ ಮಹಡಿಯಿಂದ ಬಿದ್ದು ಕೈದಿ ಸಾವು

ಇತ್ತೀಚೆಗೆ ಪತ್ನಿ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ವ್ಯಕ್ತಿ ಜೈಲಿನ ಮಹಡಿಯಿಂದ ಬಿದ್ದು ಸಾವನ್ನಪ್ಪಿದ್ದಾನೆ. ಚಾಮರಾಜನಗರ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ.

Murder accused died to fallen from the jail building
ಜೀವಾವಧಿ ಶಿಕ್ಷಗೆ ಗುರಿಯಾಗಿದ್ದ ಖೈದಿ ಸಾವು
author img

By

Published : Dec 11, 2021, 11:07 AM IST

ಚಾಮರಾಜನಗರ: ಪತ್ನಿ ಕೊಂದು ಜೀವಾವಧಿ ಶಿಕ್ಷೆಗೊಳಗಾಗಿದ್ದ ಅಪರಾಧಿಯೊಬ್ಬ ಮೊದಲನೆ ಮಹಡಿಯಿಂದ ಬಿದ್ದು ಅಸುನೀಗಿರುವ ಘಟನೆ ಇಲ್ಲಿನ ಜಿಲ್ಲಾ ಕಾರಾಗೃಹದಲ್ಲಿ ನಡೆದಿದೆ. ಚಾಮರಾಜನಗರ ತಾಲೂಕಿನ ಉತ್ತುವಳ್ಳಿ ಗ್ರಾಮದ ಮಂಜು ಎಂಬಾತ ಕೈದಿ.

ಇಂದು ಬೆಳಗ್ಗೆ ಜೈಲಿನ ಮೊದಲನೆ ಮಹಡಿಯ ಮೆಟ್ಟಿಲುಗಳಿಂದ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಮಂಜುನನ್ನು ಕೂಡಲೇ ಚಾಮರಾಜನಗರ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.

ಕೈದಿ ಮಂಜು ಆಯತಪ್ಪಿ ಬಿದ್ದನಾ ಅಥವಾ ಆತ್ಮಹತ್ಯೆ ಮಾಡಿಕೊಂಡನಾ ಎನ್ನುವುದರ ಬಗ್ಗೆ ನಿಖರವಾಗಿ ತಿಳಿದುಬಂದಿಲ್ಲ. ಚಾಮರಾಜನಗರ ಮೆಡಿಕಲ್ ಆಸ್ಪತ್ರೆಯಲ್ಲಿ ಮೃತದೇಹವಿದ್ದು ಚಾಮರಾಜನಗರ ಪಟ್ಟಣ ಠಾಣೆಗೆ ಜೈಲಿನ ಸಿಬ್ಬಂದಿ ಮಾಹಿತಿ ನೀಡಿದ್ದಾರೆ.

ಅಪ್ಪನ ವಿರುದ್ಧ ಮಗನೇ ಸಾಕ್ಷಿ ಹೇಳಿದ್ದ:

18 ವರ್ಷಗಳ ಹಿಂದೆ ಉತ್ತುವಳ್ಳಿ ಗ್ರಾಮದ ಚಿನ್ನತಾಯಮ್ಮ ಎಂಬಾಕೆಯನ್ನು ಮಂಜು ವಿವಾಹವಾಗಿದ್ದ. ಆದರೆ, 5-6 ವರ್ಷಗಳಿಂದ ಈಚೆಗೆ ಮದ್ಯಪಾನಕ್ಕೆ ದಾಸನಾಗಿ ನಿತ್ಯ ಪತ್ನಿಯೊಟ್ಟಿಗೆ ಜಗಳ ಮಾಡುವುದನ್ನು ರೂಢಿಸಿಕೊಂಡಿದ್ದ. ಅದೇ ರೀತಿ, 2017 ರ ಅಕ್ಟೋಬರ್ 26 ಮಧ್ಯರಾತ್ರಿ ದಂಪತಿ ಜಗಳ ತಾರಕಕ್ಕೇರಿತ್ತು. ಆ ವೇಳೆ, ಮಂಜು ಪತ್ನಿ ಚಿನ್ನತಾಯಮ್ಮಳಿಗೆ ಮರದ ಪಟ್ಟಿಯಿಂದ ತಲೆಗೆ ಹೊಡೆದು, ಜುಟ್ಟು ಹಿಡಿದು ಗೋಡೆಗೆ ಗುದ್ದಿಸಿ ಕೊಲೆ ಮಾಡಿದ್ದ.

ಅಂದು ರಾತ್ರಿ ತನ್ನ ಅಪ್ಪ - ಅಮ್ಮನ ನಡುವೆ ನಡೆದ ಗಲಾಟೆಯನ್ನು ಸಂಪೂರ್ಣ ಕಂಡಿದ್ದ ಮಗ ಕೊಲೆ ಮಾಡಿದ್ದು ಹೇಗೆ ಎಂಬುದನ್ನು ನ್ಯಾಯಾಲಯಕ್ಕೆ ವಿವರಿಸಿ, ಅಪರಾಧಿಗೆ ಶಿಕ್ಷೆಯಾಗುವಂತೆ ಮಾಡಿದ್ದಾನೆ. ಘಟನೆ ಸಂಬಂಧ ಚಾಮರಾಜನಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸರ್ಕಾರದ ಪರವಾಗಿ ವಕೀಲೆ ಉಷಾ ವಾದ ಮಂಡಿಸಿದ್ದರು.

ಇದನ್ನೋ ಓದಿ:ಅಪ್ಪನ ವಿರುದ್ಧವೇ ಸಾಕ್ಷಿ ನುಡಿದ ಬಾಲಕ: ಕುಡಿದ ನಶೆಯಲ್ಲಿ ಪತ್ನಿ ಕೊಂದಿದ್ದವನಿಗೆ ಜೀವಾವಧಿ ಶಿಕ್ಷೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.