ಚಾಮರಾಜನಗರ: ತಾಲೂಕಿನ ಸಿದ್ದಯ್ಯನಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ದೈಹಿಕ ಶಿಕ್ಷಣ ಶಿಕ್ಷಕ ನಾರಾಯಣ ಅವರಿಗೆ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ದೊರೆಯಲಿದೆ.
ಸಾರ್ವಜನಿಕ ಶಿಕ್ಷಣ ಇಲಾಖೆಯು ಈ ಪ್ರಶಸ್ತಿಯನ್ನು ಕೊಡಲಿದ್ದು, ಸೆ.5 ರಂದು ಬೆಂಗಳೂರಿನ ವಸಂತನಗರದಲ್ಲಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದೆಯೆಂದು ಶಿಕ್ಷಣ ಇಲಾಖೆ ತಿಳಿಸಿದೆ.
ನಾರಾಯಣ ಅವರು 2 ದಶಕಗಳಿಂದ ಶಿಕ್ಷಕ ವೃತ್ತಿಯಲ್ಲಿ ತೊಡಗಿದ್ದು ಸಾಮಾಜಿಕ ಜಾಲತಾಣವಾದ ಫೇಸ್‌ಬುಕ್ ಮೂಲಕ ದಾನಿಗಳನ್ನು ಹುಡುಕಿ ಕಾನ್ವೆಂಟ್ಗೆ ಸರಿಸಾಟಿಯಾಗಿ ಶಾಲೆಯನ್ನು ಅಭಿವೃದ್ಧಿ ಪಡಿಸಿದ್ದಾರೆ. ಈ ಕುರಿತು ಮೊದಲ ಬಾರಿಗೆ ಈಟಿವಿ ಭಾರತ ವಿಶೇಷ ಸುದ್ದಿ ಪ್ರಕಟಿಸಿ ಎಲ್ಲರ ಗಮನ ಸೆಳೆದಿತ್ತು. ಇನ್ನು, ನಾರಾಯಣ ಅವರು ಸೆಪ್ಟೆಂಬರ್ ತಿಂಗಳಿನಲ್ಲಿ ತನ್ನೆಲ್ಲಾ ಗುರುಗಳ ಮನೆಗೆ ಭೇಟಿ ಮಾಡಿ ಆಶೀರ್ವಾದ ಪಡೆಯುವ ವಿಶಿಷ್ಟ ಸಂಪ್ರದಾಯವನ್ನು ಪಾಲಿಸಿಕೊಂಡು ಬಂದಿದ್ದು, ಈ ಕುರಿತು ಈಟಿವಿ ಭಾರತ ಬೆಳಕು ಚೆಲ್ಲಿತ್ತು.