ETV Bharat / state

ಸಹಕಾರ ಬ್ಯಾಂಕ್​ ವತಿಯಿಂದ ಪೊಲೀಸರು, ಆರೋಗ್ಯ ಸಿಬ್ಬಂದಿಗೆ ಮಾಸ್ಕ್-ಸ್ಯಾನಿಟೈಸರ್ ವಿತರಣೆ

ಪೊಲೀಸರು ಮತ್ತು ವೈದ್ಯರ ಆರೋಗ್ಯ ದೃಷ್ಟಿಯಿಂದ ಮಾಸ್ಕ್ ಮತ್ತು ಸಾನಿಟೈಸರ್ ಕಿಟ್ ವಿತರಣೆ ಮಾಡುತ್ತಿದ್ದು, ಇದನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಶಾಸಕ ನರೇಂದ್ರ ಹೇಳಿದ್ದಾರೆ.

author img

By

Published : Apr 2, 2020, 6:05 PM IST

Narendra, the legislator who distributed the mask, sanitizer
ಮಾಸ್ಕ್, ಸ್ಯಾನಿಟೈಸರ್ ವಿತರಿಸಿದ ಶಾಸಕ ನರೇಂದ್ರ

ಕೊಳ್ಳೇಗಾಲ: ಕೊರೊನಾ ಸೋಂಕು ತಡೆಗೆ ಸುರಕ್ಷತೆಗಾಗಿ ಕೊಳ್ಳೇಗಾಲದ ಸರ್ಕಾರಿ‌ ಆಸ್ಪತ್ರೆಯಲ್ಲಿ ಇಂದು ಜಿಲ್ಲಾ ಸಹಕಾರ ಬ್ಯಾಂಕ್ ವತಿಯಿಂದ ವೈದ್ಯರು, ಪೊಲೀಸರಿಗೆ 3,000 ಮಾಸ್ಕ್ ಮತ್ತು ಸ್ಯಾನಿಟೈಸರ್​​ಗಳನ್ನು ಶಾಸಕ ಆರ್.ನರೇಂದ್ರ ನೇತೃತ್ವದಲ್ಲಿ ವಿತರಿಸಲಾಯಿತು.

ಸುದ್ದಿಗಾರರೊಂದಿಗೆ‌ ಮಾತನಾಡಿದ ಶಾಸಕರು, ಕೊರೊನಾ ವೈರಸ್ ವಿರುದ್ಧ ಪ್ರಾಣದ ಹಂಗು ತೊರೆದು ಆರೋಗ್ಯ ಮತ್ತು ಪೊಲೀಸ್ ಇಲಾಖೆ, ಪೌರಕಾರ್ಮಿಕರು ದಿನವಿಡೀ ನಿಸ್ವಾರ್ಥ ಮನೋಭಾವದಿಂದ ದುಡಿಯುತ್ತಿದ್ದಾರೆ. ಅವರ ಆರೋಗ್ಯದ ದೃಷ್ಟಿಯಿಂದ ಈ ಕೆಲಸ ಮಾಡಲಾಗಿದೆ ಎಂದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.