ಕೊಳ್ಳೇಗಾಲ: ಪೆಟ್ರೋಲ್, ಡಿಸೇಲ್, ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ನನಗೂ ಅಸಮಾಧಾನ ಇದೆ. ಆದರೆ, ಭ್ರಷ್ಟಚಾರ ಮುಕ್ತ ಸರ್ಕಾರವನ್ನು ಪ್ರಧಾನಿ ನರೇಂದ್ರ ಮೋದಿ ಕೊಡುತ್ತಿದ್ದಾರೆ ಎಂದು ಹಿಂದುಳಿದ ವರ್ಗಗಳ ಮೋರ್ಚಾ ರಾಜ್ಯಾಧ್ಯಕ್ಷ ನೆ.ಲ ನರೇಂದ್ರ ಬಾಬು ಹೇಳಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೋವಿಡ್ -19 ಬಂದಾಗಿನಿಂದ ಆರ್ಥಿಕ ಹೊರೆ ಉಂಟಾಗಿದೆ. ಸರ್ಕಾರ ಇದನೆಲ್ಲ ಸರಿದೂಗಿಸುತ್ತಿದ್ದು, ಅಭಿವೃದ್ಧಿ ಹಾಗೂ ರಕ್ಷಣಾ ವಲಯದಲ್ಲಿ ಉತ್ತಮ ಸೇವೆ ನೀಡಿದೆ. ಇನ್ನೂ ಈ ಹಿಂದಿನ ತೈಲ ಸಾಲವನ್ನು ತೀರಿಸಿದೆ. ಜಿಎಸ್ಟಿ ವ್ಯಾಪ್ತಿಗೆ ತಂದಿಲ್ಲ ನಿಜ. ಆದರೆ ಇದೊಂದು ವಿಷಯದಲ್ಲಿ ನನ್ನದೇ ಆದ ನಿರ್ಧಾರ, ಹೇಳಿಕೆ, ಕೊಡುವುದಕ್ಕೆ ಸಾಧ್ಯವಿಲ್ಲ. ಸರ್ಕಾರಕ್ಕೆ ನನ್ನ ಅಭಿಪ್ರಾಯವನ್ನು ವ್ಯಕ್ತಪಡಿಸುತ್ತೇನೆ ಎಂದರು.
ಪ್ರಧಾನಿ ಮೋದಿ ಭ್ರಷ್ಟಚಾರ ಮುಕ್ತ ಸರ್ಕಾರ ನೀಡಿದ್ದಾರೆ. ಹಿಂದಿನ ಸರ್ಕಾರಗಳು ಮಾಡಲಾಗದ ಅನೇಕ ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದಾರೆ. ಬಯಲು ಮುಕ್ತ ಶೌಚಾಲಯ, ಉಜ್ವಲ ಯೋಜನೆಗಳು ಯಶಸ್ವಿಯಾಗಿದೆ. ವಿಶ್ವದಲ್ಲೇ ಭಾರತದ ಸ್ಥಾನಮಾನ ಹೆಚ್ಚಾಗಿದೆ ಎಂದರು.