ETV Bharat / state

ಇದೇ 25-26ಕ್ಕೆ ಮಾದಪ್ಪನ ಬೆಟ್ಟಕ್ಕೆ ಸಿಎಂ: 200 ಮಂದಿಗಷ್ಟೇ ಆಹ್ವಾನ

author img

By

Published : Nov 13, 2020, 7:59 PM IST

ಸಿಎಂ ಬಿ.ಎಸ್‌.ಯಡಿಯೂರಪ್ಪ ನ. 25 ಮತ್ತು 26 ರಂದು ಶ್ರೀ ಕ್ಷೇತ್ರದ ವ್ಯಾಪ್ತಿಯಲ್ಲಿ 8 ವಿವಿಧ ಕಾಮಗಾರಿಗಳನ್ನು ಉದ್ಘಾಟಿಸುವರು. ಜೊತೆಗೆ, ಒಟ್ಟು 9 ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

Minister Suresh Kumar
ಜಿಲ್ಲಾ ಉಸ್ತುವಾರಿ ಸಚಿವ ಸುರೇಶ್ ಕುಮಾರ್

ಚಾಮರಾಜನಗರ: ವಿವಿಧ ಅಭಿವೃದ್ಧಿ ಕಾಮಗಾರಿಗಳ ಚಾಲನೆ ಮತ್ತು ಶಂಕುಸ್ಥಾಪನೆಗಾಗಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ಬರುತ್ತಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸುರೇಶ್ ಕುಮಾರ್ ತಿಳಿಸಿದರು.

ಡಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನ. 25 ಮತ್ತು 26 ರಂದು ಶ್ರೀ ಕ್ಷೇತ್ರದ ವ್ಯಾಪ್ತಿಯಲ್ಲಿ 1,384 ಲಕ್ಷ ರೂ‌. ವೆಚ್ಚದ 8 ವಿವಿಧ ಕಾಮಗಾರಿಗಳನ್ನು ಉದ್ಘಾಟಿಸುವರು. ಜೊತೆಗೆ, ಒಟ್ಟು 10993 ಲಕ್ಷ ರೂ‌. ವೆಚ್ಚದ 9 ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದು, ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಸುತ್ತೂರು ಶ್ರೀಗಳು, ಸಾಲೂರು ಮಠದ ಶ್ರೀಗಳು ಸಾನ್ನಿಧ್ಯ ವಹಿಸುವರು ಎಂದು ಅವರು ಹೇಳಿದರು.

ಕೋವಿಡ್-19 ತಡೆಗಟ್ಟುವ ಉದ್ದೇಶದಿಂದ ಕಾರ್ಯಕ್ರಮ ನಡೆಯುವ ರಂಗಮಂದಿರಕ್ಕೆ 200 ಮಂದಿಗಷ್ಟೇ ಆಹ್ವಾನ ನೀಡಲಿದ್ದು, ಸಾಮಾಜಿಕ ಅಂತರ ಪಾಲನೆಯಾಗಲಿದೆ ಎಂದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.