ETV Bharat / state

3ನೇ ಅಲೆ ತಡೆಗೆ ಸನ್ನದ್ಧ.. CCCಯಲ್ಲಿ ಮಗುವಿನೊಂದಿಗೆ ತಾಯಿ ಇರಲು ಅವಕಾಶ

ಕೊರೊನಾ ಪಾಸಿಟಿವ್ ಆದ ಸಂದರ್ಭದಲ್ಲಿ ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು ಮಕ್ಕಳನ್ನು ಗುರುತಿಸಿ ಅಗತ್ಯ ಚಿಕಿತ್ಸೆ ಕೊಡಿಸಲು ಸೂಚಿಸಲಾಗಿದೆ. ಅಲ್ಲದೇ ಕೋವಿಡ್ ಕೇರ್ ಕೇಂದ್ರಗಳಲ್ಲಿ ಮಗುವಿನ ಜೊತೆ ತಾಯಿ ಸಹ ಉಳಿಯಲು ಅನುಕೂಲ ಕಲ್ಪಿಸಿಕೊಡಲಾಗುವುದು. 10 ರಿಂದ 18 ವರ್ಷದೊಳಗಿನ ಹುಡುಗರು ಹಾಗೂ ಹುಡುಗಿಯರಿಗೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗುವುದು. ಜೊತೆಗೆ ಅಂಗವಿಕಲರಿಗೂ ಪ್ರತ್ಯೇಕವಾಗಿ ಚಿಕಿತ್ಸೆ ಕೊಡಿಸಲು ಅವಕಾಶ ಕಲ್ಪಿಸಲಾಗುವುದು ಎಂದು ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದರು.

opportunity-to-be-a-mother-with-a-corona-child-at-ccc
ಸಚಿವೆ ಶಶಿಕಲಾ ಜೊಲ್ಲೆ
author img

By

Published : Jun 19, 2021, 5:08 PM IST

ಚಾಮರಾಜನಗರ: ಕೊರೊನಾ 3ನೇ ಅಲೆಯನ್ನು ತಡೆಯುವ ನಿಟ್ಟಿನಲ್ಲಿ ಇಲಾಖೆಯು ಕ್ರಿಯಾ ಯೋಜನೆ ಸಿದ್ಧಪಡಿಸಿಕೊಂಡಿದ್ದು, ಮಕ್ಕಳಿಗೆ ಪ್ರತ್ಯೇಕವಾಗಿ ತಾಲೂಕು ಕೇಂದ್ರಗಳಲ್ಲಿ ಕೋವಿಡ್ ಕೇರ್ ಕೇಂದ್ರಗಳನ್ನು ತೆರೆಯುವ ಕಾರ್ಯ ಮಾಡಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು.

ಕೊರೊನಾ ಮೂರನೇ ಅಲೆ ತಡೆಗೆ ತಯಾರಿ ಕುರಿತು ಸಚಿವೆ ಶಶಿಕಲಾ ಜೊಲ್ಲೆ ಹೇಳಿಕೆ

ಜಿಲ್ಲಾಡಳಿತ ಭವನದಲ್ಲಿ ಇಲಾಖೆಯ ಸಭೆ ನಡೆಸಿದ ಬಳಿಕ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, ಹಳ್ಳಿಗಳಲ್ಲಿ ಮಕ್ಕಳಿಗೆ ಕೊರೊನಾ ಪಾಸಿಟಿವ್ ಆದ ಸಂದರ್ಭದಲ್ಲಿ ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು ಅವರನ್ನು ಗುರುತಿಸಿ ಅಗತ್ಯ ಚಿಕಿತ್ಸೆ ಕೊಡಿಸಲು ಸೂಚಿಸಲಾಗಿದೆ. ಅಲ್ಲದೇ ಕೋವಿಡ್ ಕೇರ್ ಕೇಂದ್ರಗಳಲ್ಲಿ ಮಗುವಿನ ಜೊತೆ ತಾಯಿ ಸಹ ಉಳಿಯಲು ಅನುಕೂಲ ಕಲ್ಪಿಸಿಕೊಡಲಾಗುವುದು. 10 ರಿಂದ 18 ವರ್ಷದೊಳಗಿನ ಹುಡುಗರು ಹಾಗೂ ಹುಡುಗಿಯರಿಗೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗುವುದು. ಜೊತೆಗೆ ವಿಕಲಚೇತನರಿಗೂ ಪ್ರತ್ಯೇಕವಾಗಿ ಚಿಕಿತ್ಸೆ ಕೊಡಿಸಲು ಅವಕಾಶ ಕಲ್ಪಿಸಲಾಗುವುದು. ಮಕ್ಕಳು ಆಸ್ಪತ್ರೆಗೆ ಬರುವ ಸ್ಥಿತಿ ಕಂಡುಬಂದರೆ ತಾಲೂಕು ಆಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರ ಹಾಗೂ ಜಿಲ್ಲಾಸ್ಪತ್ರೆಯಲ್ಲಿ ವಿಶೇಷ ಕೋವಿಡ್ ವಾರ್ಡ್ ಮಾಡಲು ಕ್ರಮವಹಿಸಲಾಗುವುದು ಎಂದರು.

ಜಿಲ್ಲೆಯ 5 ತಾಲೂಕುಗಳಲ್ಲೂ ತಲಾ 10 ಬೆಡ್​ಗಳು ಹಾಗೂ ಜಿಲ್ಲಾಸ್ಪತ್ರೆಯಲ್ಲಿ 100 ಬೆಡ್​​ಗಳ ವ್ಯವಸ್ಥೆ ಕಲ್ಪಿಸಲಾಗುವುದು. ಅಂಗನವಾಡಿ ಕಾರ್ಯಕರ್ತೆಯರು ಕೋವಿಡ್​​ನಿಂದ ಮೃತರಾದರೆ ಅವರ ಕುಟುಂಬಗಳಿಗೆ ತಲಾ 30 ಲಕ್ಷ ರೂ. ಪರಿಹಾರ ನೀಡಲಾಗುತ್ತಿದೆ. ಕಳೆದ ವರ್ಷ ರಾಜ್ಯದಲ್ಲಿ 20 ಹಾಗೂ ಜಿಲ್ಲೆಯಲ್ಲಿ ಇಬ್ಬರು ಅಂಗನವಾಡಿ ಕಾರ್ಯಕರ್ತೆಯರು ಮೃತಪಟ್ಟಿದ್ದು, ಇಬ್ಬರಿಗೂ ಪರಿಹಾರ ನೀಡಲಾಗಿದೆ. 2ನೇ ಅಲೆಯಲ್ಲಿ ಮೂವರು ಮೃತಪಟ್ಟಿದ್ದಾರೆ ಎಂದು ಜೊಲ್ಲೆ ಮಾಹಿತಿ ನೀಡಿದರು.

ರಾಜ್ಯದಲ್ಲಿ ಅಪೌಷ್ಟಿಕತೆ ಹಾಗೂ ತೀವ್ರ ಅಪೌಷ್ಟಿಕತೆ ಹೊಂದಿರುವ 5,412 ಮಕ್ಕಳು ಇದ್ದಾರೆ. ಈ ಮಕ್ಕಳಿಗೆ ಪ್ರತಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಆರೋಗ್ಯ ತಪಾಸಣಾ ಮಾಡುವ ಜೊತೆಗೆ ಪೌಷ್ಟಿಕ ಆಹಾರ ಕಿಟ್ ವಿತರಣೆ ಮಾಡಲಾಗುತ್ತದೆ. ಬೇರೆಡೆ ವಲಸೆ ಹೋಗಿ ಮರಳಿ ಬಂದಿರುವ 1090 ಮಹಿಳೆಯರು ಹಾಗೂ 948 ಗರ್ಭಿಣಿ, ಬಾಣಂತಿಯರಿಗೆ ಅಂಗನವಾಡಿ ಮೂಲಕ ಆಹಾರ ಕಿಟ್ ವಿತರಿಸಲು ಕ್ರಮವಹಿಸಲಾಗಿದೆ.

ಜಿಲ್ಲೆಯಲ್ಲಿ 18,142 ವಿಕಲಚೇತನರಿದ್ದು ಇವರಲ್ಲಿ 15,014 18 ವರ್ಷದ ಮೇಲ್ಪಟ್ಟವರಿದ್ದಾರೆ. 9,599 ವಿಕಲಚೇತನರಿಗೆ ಈಗಾಗಲೇ ಲಸಿಕೆ ಹಾಕಲಾಗಿದೆ. ಅಲ್ಲದೇ 1,17,813 ಹಿರಿಯ ನಾಗರಿಕರಿದ್ದು, 84,589 ಜನರಿಗೆ ವ್ಯಾಕ್ಸಿನ್​ ನೀಡಲಾಗಿದೆ ಎಂದು ಸಚಿವರು ವಿವರಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.