ETV Bharat / state

ಚಾಮರಾಜನಗರ ಆಕ್ಸಿಜನ್ ದುರಂತ: ಮೃತರ ಕುಟುಂಬಕ್ಕೆ ಉದ್ಯೋಗ ಕಲ್ಪಿಸಲು ಸರ್ಕಾರಕ್ಕೆ ಪಟ್ಟಿ ರವಾನೆ

ಚಾಮರಾಜನಗರದ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ವೇಳೆ ಆಕ್ಸಿಜನ್ ಲಭ್ಯವಾಗದೇ ಮೃತಪಟ್ಟ ಸೋಂಕಿತರ ಕುಟುಂಬಸ್ಥರಿಗೆ ಉದ್ಯೋಗ ನೀಡುವ ಸಂಬಂಧ ಸರ್ಕಾರಕ್ಕೆ ಮಾಹಿತಿ ಸಲ್ಲಿಸಿರುವುದಾಗಿ ಜಿಲ್ಲಾಧಿಕಾರಿ ಸಿ ಟಿ ಶಿಲ್ಪಾನಾಗ್ ತಿಳಿಸಿದ್ದಾರೆ.

oxygen-disaster-list-sent-to-government-to-provide-job-for-deceased-family-members
ಆಕ್ಸಿಜನ್ ಸಂತ್ರಸ್ತರ ಉದ್ಯೋಗದ ಕನಸು ಜೀವಂತ: ಸರ್ಕಾರಕ್ಕೆ ಪಟ್ಟಿ ರವಾನೆ
author img

By ETV Bharat Karnataka Team

Published : Dec 2, 2023, 4:49 PM IST

ಚಾಮರಾಜನಗರ: ಜಿಲ್ಲೆಯಲ್ಲಿ ಕೋವಿಡ್​ ಸಂದರ್ಭದಲ್ಲಿ ಸಂಭವಿಸಿದ ಆಕ್ಸಿಜನ್ ದುರಂತದಲ್ಲಿ ಮಡಿದ ಸೋಂಕಿತರ ಕುಟುಂಬಸ್ಥರಿಗೆ ಉದ್ಯೋಗ ನೀಡುವ ಸರ್ಕಾರದ ಭರವಸೆ ಇಂದಿಗೂ ಜೀವಂತವಾಗಿದೆ. ಸುಮಾರು 32 ಜನರ ಪಟ್ಟಿಯನ್ನು ಸರ್ಕಾರಕ್ಕೆ ಸಲ್ಲಿಸಿರುವುದಾಗಿ ಜಿಲ್ಲಾಧಿಕಾರಿ ಸಿ ಟಿ ಶಿಲ್ಪಾನಾಗ್ ಮಾಹಿತಿ ನೀಡಿದರು.

ಚಾಮರಾಜನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಆಕ್ಸಿಜನ್ ಸಂತ್ರಸ್ತ ಕುಟುಂಬಸ್ಥರು ಮನವಿ ಸಲ್ಲಿಸಿದ ವೇಳೆ ಮಾತನಾಡಿದ ಜಿಲ್ಲಾಧಿಕಾರಿ ಶಿಲ್ಪಾನಾಗ್, 'ಆಕ್ಸಿಜನ್ ದುರಂತದಲ್ಲಿ ಮೃತಪಟ್ಟ ಕುಟುಂಬಸ್ಥರಿಗೆ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಸುಮಾರು 32 ಜನರ ಹೆಸರನ್ನು ಸರ್ಕಾರಕ್ಕೆ ಕಳುಹಿಸಿಕೊಡಲಾಗಿದೆ. ಈ ಮೊದಲು 24 ಜನರನ್ನು ಪಟ್ಟಿ ಮಾಡಲಾಗಿತ್ತು. ಈಗ ಒಟ್ಟು 32 ಮಂದಿಯ ಹೆಸರನ್ನು ಕಳುಹಿಸಿಕೊಡಲಾಗಿದೆ. ಚಾಮರಾಜನಗರ ವೈದ್ಯಕೀಯ ಕಾಲೇಜು, ಆರೋಗ್ಯ ಇಲಾಖೆ ಅಥವಾ ಇನ್ನಿತರ ಇಲಾಖೆಗಳಲ್ಲಿ ಖಾಲಿ ಇರುವ ಸರ್ಕಾರಿ ಉದ್ಯೋ ಕಲ್ಪಿಸಿ ಕೊಡುವಂತೆ ಕ್ರಮ ವಹಿಸಲಾಗಿದೆ' ಎಂದು ಸಂತ್ರಸ್ತ ಕುಟುಂಬಗಳಿಗೆ ಭರವಸೆ ನೀಡಿದರು.

ಉದ್ಯೋಗ ದೊರಕಿಸಿಕೊಡಲು ಪ್ರಯತ್ನ ಎಂದ ಡಿಸಿ : 'ನಮ್ಮ ಕೆಲಸವನ್ನು ಮುಗಿಸಿದ್ದೇವೆ, ಸರ್ಕಾರದ ಮಟ್ಟದಲ್ಲಿ ಇದು ಆಗಬೇಕಿದೆ. ಇನ್ನೂ 4 ಜನ ಸಂತ್ರಸ್ತರು ಪಟ್ಟಿಯಲ್ಲಿ ಇರಬೇಕು ಎಂದು ಹೇಳುತ್ತಿದ್ದೀರಿ, ಯಾರಾದರೂ ಸಂತ್ರಸ್ತರಿಗೆ ಅನ್ಯಾಯವಾಗಿದ್ದರೆ ಅಂತವರ ಹೆಸರು ಮತ್ತು ದಾಖಲೆಯನ್ನು ಪ್ರತ್ಯೇಕವಾಗಿ ಸಲ್ಲಿಸಿದರೆ, ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳಲಾಗುವುದು. ಆದಷ್ಟು ಬೇಗ ಸಂತ್ರಸ್ತ ಕುಟುಂಬಸ್ಥರಿಗೆ ಉದ್ಯೋಗ ದೊರಕಿಸಿಕೊಡುವ ನಿಟ್ಟಿನಲ್ಲಿ ಪ್ರಯತ್ನ ಮಾಡಲಾಗುವುದು' ಎಂದರು.

ಇದೇ ಸಂದರ್ಭದಲ್ಲಿ ಎಸ್​ಡಿಪಿಐ ಜಿಲ್ಲಾಧ್ಯಕ್ಷ ಅಬ್ರಾರ್ ಅಹಮ್ಮದ್ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲೆಗೆ ಭೇಟಿ ನೀಡಿದ್ದ ಸಮಯದಲ್ಲಿ, ಆಕ್ಸಿಜನ್ ದುರಂತವನ್ನು ವಿಶೇಷ ಪ್ರಕರಣ ಎಂದು ಪರಿಗಣಿಸಿ ಮೃತ ಕುಟುಂಬಸ್ಥರಿಗೆ ಉದ್ಯೋಗ ನೀಡುವಂತೆ ಭರವಸೆ ನೀಡಿದ್ದರು. ಈ ನಿಟ್ಟಿನಲ್ಲಿ ಆಕ್ಸಿಜನ್ ದುರಂತದಲ್ಲಿ ಮೃತಪಟ್ಟ ಕುಟುಂಬಸ್ಥರಲ್ಲಿ ಒಬ್ಬರಿಗೆ ಆದಷ್ಟು ಬೇಗ ಸರ್ಕಾರಿ ಉದ್ಯೋಗ ಕಲ್ಪಿಸಬೇಕು ಎಂದು ಒತ್ತಾಯಿಸಿದರು. ಜಿಲ್ಲಾಧಿಕಾರಿ ಶಿಲ್ಪಾನಾಗ್ ಅವರಿಗೆ ಸಂತ್ರಸ್ತ ಕುಟುಂಬಸ್ಥರು ಮನವಿ ಸಲ್ಲಿಸಿದರು.

ಇದನ್ನೂ ಓದಿ: ಚಾಮರಾಜನಗರ ಆಕ್ಸಿಜನ್ ದುರಂತ: ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂ. ಪರಿಹಾರ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.