ಚಾಮರಾಜನಗರ: ಚಾಮರಾಜನಗರ ಕೋವಿಡ್ ಆಸ್ಪತ್ರೆಯಲ್ಲಿ 24 ರೋಗಿಗಳ ಸಾವಿಗೆ ಆಕ್ಸಿಜನ್ ಕೊರತೆಯೇ ಕಾರಣವಾಗಿದ್ದು, ದುರ್ಘಟನೆಗೆ ಚಾಮರಾಜನಗರ ಜಿಲ್ಲಾಡಳಿತವೇ ಹೊಣೆ ಎಂದು ಹೈಕೋರ್ಟ್ ನೇಮಿಸಿದ್ದ ನ್ಯಾಯಮೂರ್ತಿಗಳ ಸಮಿತಿ ತನ್ನ ತನಿಖಾ ವರದಿಯಲ್ಲಿ ತಿಳಿಸಿದೆ.
ಸೋಂಕಿತರ ಸಾವಿಗೆ ಆಕ್ಸಿಜನ್ ಕೊರತೆ ಕಾರಣವಾಗಿದೆ. ಇಂಥ ಸಂದಿಗ್ಧ ಸಂದರ್ಭದಲ್ಲಿ ನಾಯಕತ್ವ ಮತ್ತು ಕ್ರಿಯಾಶೀಲತೆ ತೋರಿಸುವಲ್ಲಿ ಜಿಲ್ಲಾಧಿಕಾರಿ ನಾಯಕತ್ವ ಹಾಗೂ ಕ್ರಿಯಾಶೀಲತೆ ತೋರಿಸುವಲ್ಲಿ ವಿಫಲವಾಗಿದ್ದಾರೆ ಎಂದು ಸಮಿತಿ ಉಲ್ಲೇಖಿಸಿದೆ.
ಜೀವನ್ಮರದ ಮಧ್ಯೆ ಹೋರಾಡುತ್ತಿದ್ದ ಸಮಯದಲ್ಲಿ ರೋಗಿಗಳಿಗೆ ಆಮ್ಲಜನಕದ ಅಗತ್ಯವಿತ್ತು. ಆದರೆ, ಆಸ್ಪತ್ರೆಯಲ್ಲಿ ಆಮ್ಲಜನಕ ಪೂರೈಕೆಯೇ ಇರಲಿಲ್ಲ. ಮೃತಪಟ್ಟವರ ಕೇಸ್ ಶೀಟ್ಗಳು ಈ ವಿಚಾರವನ್ನು ಸೂಚಿಸುತ್ತವೆ. ಆಮ್ಲಜನಕ ಕೊರತೆಯ ಕಾರಣಕ್ಕೆ ರೋಗಿಗಳ ಮಿದುಳಿನ ಕೋಶಗಳಿಗೆ ಹಾನಿಯಾಗಿತ್ತು ಎಂದು ಸಮಿತಿ ವಿವರಿಸಿದೆ.
ಇದನ್ನೂ ಓದಿ: ಚಾಮರಾಜನಗರ ದುರಂತ.. ಹೈಕೋರ್ಟ್ಗೆ ಸತ್ಯಶೋಧನಾ ವರದಿ ಸಲ್ಲಿಸಿದ ಕಾನೂನು ಸೇವಾ ಪ್ರಾಧಿಕಾರ
ಮೈಸೂರಿನಲ್ಲಿನ ಆಮ್ಲಜನಕ ಸಿಲಿಂಡರ್ ಮರುಪೂರಣ ಘಟಕದಿಂದ ಆಸ್ಪತ್ರೆಗೆ ಆಮ್ಲಜನಕ ಸರಬರಾಜು ಮಾಡಿಕೊಳ್ಳುವುದು ಜಿಲ್ಲಾಡಳಿತ ಮತ್ತು ಆಸ್ಪತ್ರೆ ಅಧಿಕಾರಿಗಳ ಜವಾಬ್ದಾರಿ. ಅದನ್ನು ಸರಿಯಾಗಿ ಮಾಡದೆ ಇರುವುದು ಅಮೂಲ್ಯ ಜೀವಗಳ ಹಾನಿಗೆ ಕಾರಣ. ಇದೇ ವೇಳೆ, ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಆಕ್ಸಿಜನ್ ಪೂರೈಕೆಗೆ ತಡೆ ಒಡ್ಡಿದ್ದಾರೆ ಎಂಬುದಕ್ಕೆ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಸಮಿತಿ ಸ್ಪಷ್ಟವಾಗಿ ಹೇಳಿದೆ.
ಇದನ್ನೂ ಓದಿ: ಆಕ್ಸಿಜನ್ ಕೊರತೆ ಚಾಮರಾಜನಗರ ದುರಂತಕ್ಕೆ ಕಾರಣ; ಡಿಸಿ ರೋಹಿಣಿ ಸಿಂಧೂರಿಗೆ ಕ್ಲೀನ್ಚಿಟ್