ಚಾಮರಾಜನಗರ: ಜಿಲ್ಲಾ ಪೊಲೀಸ್ ವತಿಯಿಂದ ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಪೊಲೀಸ್ ಹುತಾತ್ಮರ ದಿನಾಚರಣೆ ಆಚರಿಸಲಾಯಿತು.
ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿದ್ದ ಜಿಲ್ಲಾ ಸತ್ರ ನ್ಯಾಯಾಧೀಶ ಜಿ.ಬಸವರಾಜ್ ಹುತಾತ್ಮರಿಗೆ ಪುಷ್ಪಮಾಲೆ ಅರ್ಪಿಸುವ ಮೂಲಕ ಚಾಲನೆ ನೀಡಿದರು. ವಿವಿಧ ಕ್ಷೇತ್ರಗಳ ಗಣ್ಯರು ಗೌರವ ವಂದನೆ ಸಲ್ಲಿಸಿದರು.
ಎಸ್ಪಿ ಎಚ್.ಡಿ.ಆನಂದಕುಮಾರ್, ಎಸಿಪಿ ಅನಿತಾ ಹದ್ದಣ್ಣನವರ್ ಇನ್ನಿತರರು ಉಪಸ್ಥಿತರಿದ್ದರು.