ಚಾಮರಾಜನಗರ: ಅಯೋಧ್ಯೆ ತೀರ್ಪು ಪ್ರಕಟ ಹಿನ್ನೆಲೆ ಜಿಲ್ಲಾದ್ಯಂತ ಪೊಲೀಸರು ಕಟ್ಟೆಚ್ಚರ ವಹಿಸಿದ್ದು, ಚಾಮರಾಜನಗರ, ಕೊಳ್ಳೇಗಾಲದಲ್ಲಿ ಪಥಸಂಚಲನ ನಡೆಸಿದ್ದಾರೆ.
ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಮಂದಿರ, ಚರ್ಚ್ ಮತ್ತು ಮಸೀದಿಗಳಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ. ಪುಂಡರ ಮೇಲೆ ಈಗಾಗಲೇ ಪೊಲೀಸ್ ಇಲಾಖೆ ಕಣ್ಣಿಟ್ಟಿದ್ದು, ಗೂಂಡಾಗಳಿಗೆ ಖಡಕ್ ಎಚ್ಚರಿಕೆ ನೀಡಿಡಲಾಗಿದೆ. ಕೋಮು ಸಾಮರಸ್ಯ ಕದಡುವ ಮನಸ್ಸಿನ 25 ಮಂದಿ ಗೂಂಡಾಗಳನ್ನು ಮುನ್ನೆಚ್ಚರಿಕೆ ಕ್ರಮವಾಗಿ ಬಂಧಿಸಿ ವಶಕ್ಕೆ ಪಡೆಯಲಾಗಿದೆ ಎಂದು ಎಸ್ಪಿ ಎಚ್.ಡಿ.ಆನಂದಕುಮಾರ್ ತಿಳಿಸಿದ್ದಾರೆ.
ಕೊಳ್ಳೇಗಾಲದಲ್ಲಿ ಡಿವೈಎಸ್ಪಿ ನವೀನ್ ಕುಮಾರ್, ಗುಂಡ್ಲುಪೇಟೆಯಲ್ಲಿ ಸಿಪಿಐ ಮಹಾದೇವಸ್ವಾಮಿ, ನಗರದಲ್ಲಿ ಎಸ್ಪಿ ನೇತೃತ್ವದಲ್ಲಿ ಡಿವೈಎಸ್ಪಿ ಭದ್ರತೆ ಕೈಗೊಂಡಿದ್ದಾರೆ.