ಚಾಮರಾಜನಗರ: ನಗರದಲ್ಲಿಂದು ಬೆಳ್ಳಂಬೆಳಗ್ಗೆ ಕಾರ್ಯಾಚರಣೆಗಿಳಿದ ಪೊಲೀಸರು ಇಬ್ಬರು ಪಿಎಫ್ಐ ಮುಖಂಡರನ್ನು ವಶಕ್ಕೆ ಪಡೆದಿದ್ದಾರೆ. ಪಿಎಫ್ಐ ಸಂಘಟನೆಯ ಜಿಲ್ಲಾಧ್ಯಕ್ಷ ಕಪಿಲ್ ಹಾಗು ಕಾರ್ಯದರ್ಶಿ ಶೋಯೆಬ್ ಎಂಬುವವರನ್ನು ವಶಕ್ಕೆ ಪಡೆಯಲಾಗಿದೆ.
ಇಂದು ಬೆಳಗಿನಜಾವ ಪೊಲೀಸರು ದಾಳಿ ನಡೆಸಿದ್ದು, ಇಬ್ಬರು ಪಿಎಫ್ಐ ಮುಖಂಡರನ್ನು ವಶಕ್ಕೆ ಪಡೆದು ಚಾಮರಾಜನಗರ ತಹಶಿಲ್ದಾರ್ ನಿವಾಸಕ್ಕೆ ಹಾಜರುಪಡಿಸಿದ್ದಾರೆ. ಎನ್ಐಎ ಕೊಟ್ಟ ಮಾಹಿತಿ ಮೇರೆಗೆ ಈ ದಾಳಿ ನಡೆಸಿದ್ದಾರೆ ಎನ್ನಲಾಗ್ತಿದೆ.
ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡ ಇವರಿಬ್ಬರನ್ನು ಬಂಧಿಸಿದ್ದು, ವಿಚಾರಣೆಗೊಳಪಡಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ಇದನ್ನೂ ಓದಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪಿಎಫ್‌ಐ ಮುಖಂಡರ ಮೇಲೆ ದಾಳಿ.. 9 ಮಂದಿ ಪೊಲೀಸ್ ವಶಕ್ಕೆ