ETV Bharat / state

ಜೂಜು ಅಡ್ಡೆಗಳ ಮೇಲೆ ಪೊಲೀಸರ ದಾಳಿ: 11 ಮಂದಿ‌ ಬಂಧನ - ಜೂಜು ಆಡುತ್ತಿದ್ದವರ ಮೇಲೆ ಪೊಲೀಸರು ದಾಳಿ

ತಾಲೂಕಿನ ಮುಳ್ಳೂರು ಗ್ರಾಮದ ಹೊರವಲಯ ಹಾಗು ಸಿಲ್ಕಲ್ ಪುರದಲ್ಲಿ ಜೂಜುಕೋರ ಅಡ್ಡೆಗಳ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ.

Police raided two gambling centers and 11 people arrested
ಎರಡು ಜೂಜು ಅಡ್ಡೆ ಮೇಳೆ ಪೊಲೀಸರ ದಾಳಿ
author img

By

Published : Mar 18, 2021, 5:21 PM IST

ಕೊಳ್ಳೇಗಾಲ (ಚಾಮರಾಜನಗರ): ಜೂಜು ಆಡುತ್ತಿದ್ದವರ ಮೇಲೆ ಪೊಲೀಸರು ದಾಳಿ ನಡೆಸಿದ್ದು ಎರಡು ಪ್ರತ್ಯೇಕ ಪ್ರಕರಣದಲ್ಲಿ 11 ಮಂದಿಯನ್ನು ಬಂಧಿಸಿದ್ದಾರೆ.

ತಾಲೂಕಿನ ಮುಳ್ಳೂರು ಗ್ರಾಮದ ಹೊರವಲಯದಲ್ಲಿ ಜೂಜಾಡುತ್ತಿದ್ದಾರೆ ಎಂಬ ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಿದ ಪೊಲೀಸರು ಅದೇ ಗ್ರಾಮದ ರವಿ, ಅಶೋಕ್, ಸಿದ್ದರಾಜು, ಮಾದೇಶ, ರಾಜಣ್ಣ, ಗುರುರಾಜು, ಮಹೇಶ್ ಹಾಗೂ ಕಾಮರಾಜು ಎಂಬುವವರನ್ನು ಬಂಧಿಸಿದ್ದಾರೆ. ಜೊತೆಗೆ 7,450 ರೂ. ವಶಪಡಿಸಿಕೊಂಡಿದ್ದಾರೆ.

ಮತ್ತೊಂದು ಪ್ರಕರಣದಲ್ಲಿ ತಾಲೂಕಿನ ಸಿಲ್ಕಲ್ ಪುರ ಗ್ರಾಮದ ಹೊರವಲಯದ ಚಾನಲ್ ರಸ್ತೆಯಲ್ಲಿ ಜೂಜಾಡುತ್ತಿದ್ದ ಐವರಲ್ಲಿ ಮೂವರನ್ನು ಪೊಲೀಸರು ಬಂಧಿಸಿದ್ದು, 6,130 ರೂ. ವಶಪಡಿಸಿಕೊಂಡಿದ್ದಾರೆ. ಕಾರ್ಯಚರಣೆ ವೇಳೆ ಪರಾರಿಯಾದ ಇನ್ನಿಬ್ಬರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

ಇದನ್ನೂ ಓದಿ: ಬಳ್ಳಾರಿಯಲ್ಲಿ ಕೃಷಿ ಹೊಂಡಕ್ಕೆ ಹಾರಿ ತಾಯಿ, ಮಕ್ಕಳ ಆತ್ಮಹತ್ಯೆ; ಕುಟುಂಬಕ್ಕಿತ್ತು ₹ 20 ಲಕ್ಷ ಸಾಲ!

ETV Bharat Logo

Copyright © 2024 Ushodaya Enterprises Pvt. Ltd., All Rights Reserved.