ಗುಂಡ್ಲುಪೇಟೆ: ಪ್ರವಾಸದ ನಿಮಿತ್ತ ಗುರುವಾರ ಬೇಗೂರು ಗ್ರಾಮಕ್ಕೆ ಆಗಮಿಸಿದ್ದ ಶ್ರೀರಾಮ ಸೇನೆಯ ಸಂಸ್ಥಾಪಕ, ಅಧ್ಯಕ್ಷ ಪ್ರಮೋದ್ ಮುತಾಲಿಕ್ ಅವರನ್ನು ಭೇಟಿಯಾಗಿ ಬಿಜೆಪಿ ಘಟಕದ ವತಿಯಿಂದ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ದೇಶ, ಧರ್ಮ ಹಾಗೂ ನಮ್ಮ ಸನಾತನ ಸಂಸ್ಕೃತಿಯ ಉಳಿವಿಗಾಗಿ ಇಂದಿನ ಯುವಕರ ಪಾತ್ರದ ಕುರಿತು ಚರ್ಚೆ ನಡೆಸಿದರು. ಬಳಿಕ ಮಾತನಾಡಿದ ಅವರು, ದೇಶ ಭಾಷೆಗೆ ಬದ್ಧರಾಗಿರಬೇಕು. ಪ್ರಧಾನಿ ನರೇಂದ್ರ ಮೋದಿ ಅವರು ದೇಶಕ್ಕಾಗಿ ದುಡಿಯುತ್ತಿದ್ದಾರೆ ಅವರಿಗೆ ದೇಶಾಭಿಮಾನಿಗಳು ಬೆಂಬಲ ನೀಡಬೇಕು ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಪ್ರಣಯ್, ಹಂಗಳ ಬಿಜೆಪಿ ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ಬಸವೇಶ್, ಹಂಗಳ ಕರ್ನಾಟಕ ಪಬ್ಲಿಕ್ ಶಾಲೆಯ ಸಿಡಿಎಂಎಸ್ ಅಧ್ಯಕ್ಷ ರಾಜಶೇಖರ ಹೆಚ್ ಪಿ.ಪ್ರಸಾದ್, ಪ್ರಕಾಶ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.