ಚಾಮರಾಜನಗರ: ಕೇರಳದಲ್ಲಿ ಆರೆಸ್ಸೆಸ್ ವೇಷಧಾರಿಗಳನ್ನು ಬಂಧಿಸುವ ಅಣಕು ಪ್ರದರ್ಶನ ಹಾಗೂ ಯುವಕನ ಹತ್ಯೆ ಖಂಡಿಸಿ ನಗರದಲ್ಲಿ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ನಗರದ ಕೊಳದ ಆಂಜನೇಯ ದೇಗುಲದಿಂದ ಭುವನೇಶ್ವರಿ ವೃತ್ತದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಕಾರ್ಯಕರ್ತರು, ಮಾನವ ಸರಪಳಿ ರಚಿಸಿ ಎಸ್ಡಿಪಿಐ ಹಾಗೂ ಪಿಎಫ್ಐ ಸಂಘಟನೆಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರ ಹಾಕಿದರು.
ಇದನ್ನೂ ಓದಿ: ಡಿಕೆಶಿ ನೇತೃತ್ವದಲ್ಲಿ ಕೈ ಕಾರ್ಯಕರ್ತೆಯರ ಬೃಹತ್ ಪ್ರತಿಭಟನಾ ಮೆರವಣಿಗೆ
ಹಿಂದೂ ಸಮಾಜದ ಮೇಲೆ ಈ ಸಂಘಟನೆಗಳ ಕಾರ್ಯಕರ್ತರು ರಾಕ್ಷಸೀ ಕೃತ್ಯ ಎಸಗುತ್ತಿದ್ದಾರೆ. ಹಾಗಾಗಿ ಈ ಸಂಘಟನೆಗಳನ್ನು ಕೂಡಲೇ ನಿಷೇಧಿಸಬೇಕು. ಕೇರಳದಲ್ಲಿ ನಡೆಯುತ್ತಿರುವ ಜಿಹಾದಿ ಕಾರ್ಯ ನಿಲ್ಲಿಸಬೇಕು. ಇಲ್ಲದಿದ್ದರೆ ಪರಿಸ್ಥಿತಿ ವಿಕೋಪಕ್ಕೆ ತಿರುಗಲಿದೆ ಎಂದು ಎಚ್ಚರಿಸಿದರು.