ಚಾಮರಾಜನಗರ: ಹೊರಗುತ್ತಿಗೆ ಆಧಾರದ ಮೇಲೆ ವಾಹನ ಬಳಕೆಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಆರೋಪಿಸಿ ಜಿಲ್ಲಾಡಳಿತ ಭವನದ ಆವರಣದಲ್ಲಿ ಕನ್ನಡಪರ ಸಂಘಟನೆಗಳು ತಮಟೆ ಚಳವಳಿ ನಡೆಸಿ ಪ್ರತಿಭಟಿಸಿದವು.
ಜಿಪಂನ ವಿವಿಧ ಇಲಾಖೆಗೆ ಹೊರಗುತ್ತಿಗೆಯ ಮೇಲೆ ವಾಹನಗಳನ್ನು ತೆಗೆದುಕೊಳ್ಳುತ್ತಿದ್ದು, ಅದರಲ್ಲಿ ಭ್ರಷ್ಟಾಚಾರ ಎಸಗಲಾಗುತ್ತಿದೆ. ಕೆಟಿಪಿಪಿ ಕಾಯ್ದೆಯನ್ನು ಉಲ್ಲಂಘಿಸಿ ಮಾಲೀಕರ ಹೆಸರನ್ನೇ ಸೃಷ್ಟಿಸಿ ಹಣ ಮಾಡುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಎಚ್ಚರಿಸಿದರು.
ಈ ಸಂಬಂಧ ಉನ್ನತಮಟ್ಟದ ತನಿಖೆ ನಡೆಯಬೇಕು, ಹೊರಗುತ್ತಿಗೆ ಆಧಾರದ ವಾಹನ ಬಳಕೆಯಲ್ಲಾಗುತ್ತಿರುವ ಭ್ರಷ್ಟಾಚಾರ ನಿಲ್ಲಬೇಕು ಇಲ್ಲದಿದ್ದಲ್ಲಿ ನಿರಂತರ ಹೋರಾಟ ನಡೆಸುತ್ತೇವೆ ಎಂದು ಪ್ರತಿಭಟನಾಕಾರರು ಎಚ್ಚರಿಸಿದರು.