ETV Bharat / state

ಕಾವೇರಿ ಕಿಚ್ಚು: ಡಿಸಿ ಕಚೇರಿ ಎದುರು ಧರಣಿ, ಸಿಎಂಗೆ ಕಪ್ಪು ಬಾವುಟ ಪ್ರದರ್ಶನದ ಎಚ್ಚರಿಕೆ

ಚಾಮರಾಜನಗರದಲ್ಲಿ ಸರಣಿ ಪ್ರತಿಭಟನೆಗಳು ನಡೆಯುತ್ತಿವೆ. ಕೇಂದ್ರ ಮಧ್ಯ ಪ್ರವೇಶಕ್ಕೆ ಆಗ್ರಹಿಸಿ ಕನ್ನಡಪರ ಸಂಘಟನೆಗಳು ಇಂದು ಬಿಎಸ್ಎನ್ಎಲ್ ಕಚೇರಿಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿವೆ.

Protest in Chamarajanagar over Cauvery dispute
ಕಾವೇರಿ ಕಿಚ್ಚು.. ಡಿಸಿ ಕಚೇರಿ ಎದುರು ಧರಣಿ
author img

By ETV Bharat Karnataka Team

Published : Sep 22, 2023, 2:11 PM IST

ಕನ್ನಡಪರ ಸಂಘಟನೆಗಳಿಂದ ಬಿಎಸ್ಎನ್ಎಲ್ ಕಚೇರಿಗೆ ಮುತ್ತಿಗೆ

ಚಾಮರಾಜನಗರ: ಕಾವೇರಿ ನೀರನ್ನು ತಮಿಳುನಾಡುಗೆ ಹರಿಸುತ್ತಿರುವುದನ್ನು ಖಂಡಿಸಿ ಚಾಮರಾಜನಗರದಲ್ಲಿ ಸರಣಿ ಪ್ರತಿಭಟನೆಗಳು ನಡೆಯುತ್ತಿವೆ. ರಾಜ್ಯ ರೈತ ಸಂಘದ ಕಾರ್ಯಕರ್ತರು ಇಂದು ಡಿಸಿ ಕಚೇರಿ ಎದುರು ಧರಣಿ ನಡೆಸಿ ಆಕ್ರೋಶ ಹೊರಹಾಕಿದರು.

ನಗರದ ಚಾಮರಾಜೇಶ್ವರ ದೇಗುಲ ಮುಂಭಾಗದಿಂದ ಹೊನ್ನೂರು ಬಸವಣ್ಣ ನೇತೃತ್ವದಲ್ಲಿ ಪ್ರತಿಭಟನಾ ಮೆರವಣಿಗೆ ಹೊರಟು ರಾಷ್ಟ್ರೀಯ ಹೆದ್ದಾರಿ ಹಾದು ಹೋಗುವ ಭುವನೇಶ್ವರಿ ವೃತ್ತದಲ್ಲಿ ರಸ್ತೆ ತಡೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ರೈತರು ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಘೋಷಣೆ ಕೂಗಿದರು‌.

ಕಪ್ಪು ಬಾವುಟ ಪ್ರದರ್ಶನದ ಎಚ್ಚರಿಕೆ: "ರಾಜ್ಯದ ರೈತರ ಹಿತವನ್ನು ಬಲಿ ಕೊಟ್ಟು ರಾತ್ರೋರಾತ್ರಿ ನೀರನ್ನು ಬಿಡಲಾಗುತ್ತಿದೆ. ಕೂಡಲೇ, ನೀರು ನಿಲ್ಲಿಸದಿದ್ದರೇ ಸೆ. 27 ರಂದು ಸಿಎಂ ಚಾಮರಾಜನಗರಕ್ಕೆ ಬಂದ ವೇಳೆ ಕಪ್ಪು ಬಾವುಟ ಪ್ರದರ್ಶನ ಮಾಡುತ್ತೇವೆ" ಎಂದು ಎಚ್ಚರಿಕೆ ನೀಡಿದರು.

ಬಿಎಸ್ಎನ್ಎಲ್ ಕಚೇರಿಗೆ ಮುತ್ತಿಗೆ: ಕಾವೇರಿ ಸಂಕಷ್ಟಕ್ಕೆ ಕೇಂದ್ರ ಸರ್ಕಾರ ಮಧ್ಯ ಪ್ರವೇಶಿಸಿ ವಿವಾದ ಬಗೆಹರಿಸಬೇಕು ಎಂದು ಆಗ್ರಹಿಸಿ ನಗರದಲ್ಲಿ ಕನ್ನಡಪರ ಸಂಘಟನೆಗಳು ಬಿಎಸ್ಎನ್ ಎಲ್ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ನಗರದ ಮಾರಿಗುಡಿ ಸಮೀಪ ಇರುವ ಬಿಎಸ್​ಎನ್​ಎಲ್ ಕಚೇರಿಗೆ ಚಾ.ರಂ.ಶ್ರೀನಿವಾಸಗೌಡ ನೇತೃತ್ವದಲ್ಲಿ ಪ್ರತಿಭಟನಾಕರರು ಮುತ್ತಿಗೆ ಹಾಕಿ ತಮಿಳುನಾಡು ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಘೋಷಣೆ ಕೂಗಿದರು.

ಕೇಂದ್ರದ ಮಧ್ಯ ಪ್ರವೇಶಕ್ಕೆ ಆಗ್ರಹ: "ನಮಗೇ ಕುಡಿಯಲು ನೀರಿಲ್ಲ. ಆದರೆ ತಮಿಳುನಾಡು 3ನೇ ಬೆಳೆಗೆ ನೀರು ಕೇಳುತ್ತಿದೆ. ಸರ್ಕಾರ ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರು ಹರಿಸಬಾರದು. ತಮಿಳುನಾಡು ಇದೇ ರೀತಿ ಕ್ಯಾತೆ ತೆಗೆಯುತ್ತಿದ್ದರೇ ತಮಿಳು ಚಿತ್ರ, ತಮಿಳು ವಾಹನಗಳಿಗೆ ನಿರ್ಬಂಧ ಹೇರುತ್ತೇವೆ" ಎಂದು ಎಚ್ಚರಿಕೆ ನೀಡಿದರು. ಕಾವೇರಿ ವಿಚಾರದಲ್ಲಿ ಕರ್ನಾಟಕ ರಾಜ್ಯಕ್ಕೆ ಇಷ್ಟೆಲ್ಲಾ ಅನ್ಯಾಯವಾದರೂ ಕೂಡ ಕೇಂದ್ರ ಸರ್ಕಾರ ಮೌನ ವಹಿಸಿರುವುದು ಸರಿಯಲ್ಲ. ಕೂಡಲೇ ಮಧ್ಯ ಪ್ರವೇಶಿಸಿ ವಿವಾದವನ್ನು ಇತ್ಯರ್ಥ ಮಾಡಬೇಕು. ಕರ್ನಾಟಕ ಸರ್ಕಾರದಿಂದ ರಾಜ್ಯದ ರೈತರಿಗೆ, ಜನರಿಗೆ ಅನ್ಯಾಯವಾಗುತ್ತಿದೆ. ಇದನ್ನು ಸಹಿಸಲಾಗದು. ಕೂಡಲೇ ಕೇಂದ್ರ ಸರ್ಕಾರ ಮಧ್ಯ ಪ್ರವೇಶ ಮಾಡಬೇಕೆಂದು ಎಂದು ಒತ್ತಾಯಿಸಿದರು.

ಇದನ್ನೂ ಓದಿ: ರಾಜ್ಯದಲ್ಲಿ 'ಕಾವೇರಿ'ದ ಜಲ ವಿವಾದ: ಬೆಂಗಳೂರಿನಲ್ಲಿ ತಮಿಳಿಗರು ವಾಸಿಸುವ ಪ್ರದೇಶಗಳಿಗೆ ಪೊಲೀಸ್​ ಭದ್ರತೆ

ರಾಜ್ಯದ ಜನರಿಗೆ ಅನ್ಯಾಯ: ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ಹೊರಡಿಸಿರುವ ಆದೇಶದಲ್ಲಿ ಕನ್ನಡಿಗರಿಗೆ ತೀವ್ರ ಅನ್ಯಾಯ ಆಗಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆಯ ಅಧ್ಯಕ್ಷ ಟಿ ಎ ನಾರಾಯಣಗೌಡ ಆತಂಕ ವ್ಯಕ್ತಪಡಿಸಿದರು. ನಿನ್ನೆ ತಮಿಳುನಾಡಿಗೆ ಕಾವೇರಿ ನೀರು ಹರಿಸದಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿ ಗಾಂಧಿನಗರದ ಕರವೇ ಕೇಂದ್ರ ಕಚೇರಿಯಿಂದ ವಿಧಾನಸೌಧದವರೆಗೆ ಕಾಲ್ನಡಿಗೆ ಜಾಥಾ ನಡೆಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕ ಮತ್ತು ಕಾವೇರಿ ಕಣಿವೆ ಪ್ರದೇಶದಲ್ಲಿ ತೀವ್ರ ತರವಾದ ಬರಗಾಲವಿದ್ದರೂ ತಮಿಳುನಾಡಿಗೆ ಮತ್ತೆ 15 ದಿನಗಳ ಕಾಲ 5000 ಕ್ಯೂಸೆಕ್​ ನೀರು ಹರಿಸಲು ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ಹೊರಡಿಸಿರುವ ಆದೇಶವನ್ನು ರಾಜ್ಯ ಸರ್ಕಾರ ಯಾವುದೇ ಕಾರಣಕ್ಕೂ ಪಾಲಿಸಬಾರದು ಎಂದು ಆಗ್ರಹಿಸಿದರು.

ಇದನ್ನೂ ಓದಿ: ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರದಿಂದ ರಾಜ್ಯದ ಜನರಿಗೆ ಅನ್ಯಾಯ: ಕರವೇ ಅಧ್ಯಕ್ಷ ನಾರಾಯಣಗೌಡ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.