ETV Bharat / state

ಕೊಳ್ಳೇಗಾಲ: ಅಂಬೇಡ್ಕರ್ ನಿವಾಸದ ಮೇಲಿನ ದಾಳಿ ಖಂಡಿಸಿ ಪ್ರತಿಭಟನೆ - ಡಾ.ಬಿ.ಆರ್.ಅಂಬೇಡ್ಕರ್ ನಿವಾಸವಾದ ರಾಜಗೃಹದ ಮೇಲೆ ದಾಳಿ

ಮುಂಬೈನಲ್ಲಿರುವ ಡಾ.ಬಿ.ಆರ್. ಅಂಬೇಡ್ಕರ್ ನಿವಾಸವಾದ ರಾಜಗೃಹದ ಮೇಲೆ ದಾಳಿ ನಡೆಸಿರುವ ಕಿಡಿಗೇಡಿಗಳನ್ನು ರಾಷ್ಟ್ರ ದ್ರೋಹಿಗಳು‌‌ ಎಂದು ಪರಿಗಣಿಸಿ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿ ಪ್ರತಿಭಟನೆ ನಡೆಸಲಾಯಿತು.

protest
protest
author img

By

Published : Jul 17, 2020, 2:06 PM IST

ಕೊಳ್ಳೇಗಾಲ‌ (ಚಾಮರಾಜನಗರ): ಮುಂಬೈನಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ನಿವಾಸವಾದ ರಾಜಗೃಹದ ಮೇಲೆ ದಾಳಿ ನಡೆಸಿರುವ ಕಿಡಿಗೇಡಿಗಳನ್ನು ರಾಷ್ಟ್ರ ದ್ರೋಹಿಗಳು‌‌ ಎಂದು ಪರಿಗಣಿಸಿ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿ ಇಂದು ಅಂಬೇಡ್ಕರ್ ಸ್ಮಾರಕ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಪಟ್ಟಣದ ಪ್ರಮುಖ‌ ರಸ್ತೆಗಳಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು ತಾಲೂಕು‌ ಕಚೇರಿಯ ಮುಂಭಾಗ ಸಮಾವೇಶಗೊಂಡು ತಹಶೀಲ್ದಾರ್ ಕುನಾಲ್​ಗೆ ಮನವಿ ಪತ್ರ ಸಲ್ಲಿಸಿದರು.

ಅಂಬೇಡ್ಕರ್ ಮನೆ ಮೇಲಿನ ದಾಳಿ ಖಂಡಿಸಿ ಪ್ರತಿಭಟನೆ

ಡಾ.ಬಿ.ಆರ್. ಅಂಬೇಡ್ಕರ್ ಸಂಘದ ತಾಲೂಕು‌ ಅಧ್ಯಕ್ಷ ನಟರಾಜು ಮಾತನಾಡಿ, ರಾಜಗೃಹದ ಮೇಲೆ ದಾಳಿ ಮಾಡಿರುವ ದುಷ್ಕರ್ಮಿಗಳ ನಡೆ ಖಂಡನೀಯ, ಈ ಕೃತ್ಯ ಎಸಗಿದವರನ್ನು ರಾಷ್ಟ್ರ ದ್ರೋಹಿ ಎಂದು ಪರಿಗಣಿಸಿ ಕಠಿಣ ಕಾನೂನು ಕ್ರಮಕ್ಕೆ ಒಳಪಡಿಸಬೇಕು. ಮುಂದಿನ ದಿನಗಳಲ್ಲಿ ಅಪರಾಧಿಗಳಿಗೆ ಶಿಕ್ಷೆಯಾಗದಿದ್ದರೆ ಕೊಳ್ಳೇಗಾಲವನ್ನು ಬಂದ್ ಮಾಡಿ ಉಗ್ರ ಹೋರಾಟ ಮಾಡುತ್ತೇವೆ ಎಂದಿದ್ದಾರೆ.

ದಾಳಿ ನಡೆಸಿರುವ ಆರೋಪಿಗಳನ್ನು ಶೀಘ್ರಗತಿಯಲ್ಲಿ ಬಂಧಿಸುವ ಮೂಲಕ ದೇಶ ವಿರೋಧಿ ಚಟುವಟಿಕೆ ದೂರು ದಾಖಲಿಸಿ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ, ಜಿಲ್ಲಾದ್ಯಂತ ಉಗ್ರ ಪ್ರತಿಭಟನೆ ಮಾಡುತ್ತೇವೆ ಎಂದು ಮುಖಂಡ ನಾಗರಾಜು ತಿಳಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.