ETV Bharat / state

ಬಜೆಟ್​ನಲ್ಲಿ ಚಾಮರಾಜನಗರ ಕಡೆಗಣನೆ ಖಂಡಿಸಿ ಅರೆಬೆತ್ತಲೆ ಪ್ರತಿಭಟನೆ - chamrajanagara news

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ಮಂಡಿಸಿರುವ ಬಜೆಟ್​ನಲ್ಲಿ ಚಾಮರಾಜನಗರಕ್ಕೆ ಪ್ರಾತಿನಿಧ್ಯ ನೀಡಿಲ್ಲವೆಂದು ಆರೋಪಿಸಿ ಕನ್ನಡಪರ ಹೋರಾಟಗಾರರು ಅರೆಬೆತ್ತಲೆ ಪ್ರತಿಭಟನೆ ನಡೆಸಿದರು.

protests by Kannada fighters condemning Chamarajanagar boycott in budget
ಬಜೆಟ್​ನಲ್ಲಿ ಚಾಮರಾಜನಗರ ಕಡೆಗಣನೆ ಖಂಡಿಸಿ ಕನ್ನಡಪರ ಹೋರಾಟಗಾರರಿಂದ ಅರೆಬೆತ್ತಲೆ ಪ್ರತಿಭಟನೆ!
author img

By

Published : Mar 6, 2020, 5:01 PM IST

ಚಾಮರಾಜನಗರ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ಮಂಡಿಸಿರುವ ಬಜೆಟ್​ನಲ್ಲಿ ಚಾಮರಾಜನಗರಕ್ಕೆ ಪ್ರಾತಿನಿಧ್ಯ ನೀಡಿಲ್ಲವೆಂದು ಆರೋಪಿಸಿ ಕನ್ನಡಪರ ಹೋರಾಟಗಾರರು ಅರೆಬೆತ್ತಲೆ ಪ್ರತಿಭಟನೆ ನಡೆಸಿದರು.

ಬಜೆಟ್​ನಲ್ಲಿ ಚಾಮರಾಜನಗರ ಕಡೆಗಣನೆ ಖಂಡಿಸಿ ಕನ್ನಡಪರ ಹೋರಾಟಗಾರರಿಂದ ಅರೆಬೆತ್ತಲೆ ಪ್ರತಿಭಟನೆ

ಜಿಲ್ಲಾಡಳಿತ ಭವನದ ಪ್ರವೇಶ ದ್ವಾರದಲ್ಲಿ ಜಮಾಯಿಸಿದ ಕನ್ನಡಪರ ಹೋರಾಟಗಾರರು, ತಮ್ಮ ಶರ್ಟ್ ಕಳಚಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದರು‌. ಬಜೆಟ್​ನಲ್ಲಿ ವಿಶೇಷವಾಗಿ ಒಂದೂ ರೂಪಾಯಿಯನ್ನೂ ಚಾಮರಾಜನಗರದ ಹೆಸರು ಹೇಳಿ ನೀಡಿಲ್ಲ ಎಂದು ಯಡಿಯೂರಪ್ಪ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸುರೇಶ್​ ಕುಮಾರ್ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿದರು.

ಅಲ್ಲದೇ, ಜಿಲ್ಲೆಗೆ ಅನುದಾನ ತರುವಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸುರೇಶ್ ಕುಮಾರ್ ವಿಫಲರಾಗಿದ್ದಾರೆ‌. ರಾಜ್ಯದ ಬಜೆಟ್​ನಲ್ಲಿ ಚಾಮರಾಜನಗರಕ್ಕೆ ತಾರತಮ್ಯ ಎಸಗಿದ್ದಾರೆಂದು ಆಕ್ರೋಶ ಹೊರಹಾಕಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.