ಚಾಮರಾಜನಗರ: ನಟ ಪುನೀತ್ ರಾಜ್‍ಕುಮಾರ್ ಸಾವನ್ನು ಅರಗಿಸಿಕೊಳ್ಳಲಾಗದ ಅಭಿಮಾನಿಗಳು ತೀವ್ರ ಆಘಾತಕ್ಕೊಳಗಾಗುತ್ತಿದ್ದಾರೆ. ಸದ್ಯ ಕೊಳ್ಳೇಗಾಲದಲ್ಲಿ ಓರ್ವ ಅಭಿಮಾನಿ ಆಹಾರ ತ್ಯಜಿಸಿ ಮೃತಪಟ್ಟಿರುವ ಘಟನೆ ನಡೆದಿದೆ.
ಕೊಳ್ಳೇಗಾಲದ ಭೀಮನಗರ ನಿವಾಸಿ ಶಿವಮೂರ್ತಿ (31) ಮೃತ ಅಭಿಮಾನಿ. ಈತ ವೃತ್ತಿಯಲ್ಲಿ ಫೋಟೋಗ್ರಾಫರ್ ಆಗಿದ್ದ ಶಿವಮೂರ್ತಿ ಅಪ್ಪು ಅವರ ಅಪ್ಪಟ ಅಭಿಮಾನಿಯಾಗಿದ್ದರು. ಪುನೀತ್ ರೀತಿ ಡ್ಯಾನ್ಸ್, ಸ್ಟೈಲ್, ವಿನಯ ತೋರುತ್ತಿದ್ದ ಇವರು ಪವರ್ಸ್ಟಾರ್ ಸಾವಿನ ಬಳಿಕ ಆಹಾರ ತ್ಯಜಿಸಿದ್ದರು.
ಕಳೆದ ಒಂದು ವಾರದಿಂದ ಆಹಾರ ಸೇವಿಸದ ಇವರು ಎದೆನೋವೆಂದು ಗುರುವಾರ ರಾತ್ರಿ ಆಸ್ಪತ್ರೆಗೆ ದಾಖಲಾಗಿದ್ದರು. ಇಂದು ಮುಂಜಾನೆ ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ. ಸದ್ಯ, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಇದನ್ನೂ ಓದಿ: ಹೈದರಾಬಾದ್ನಲ್ಲಿ ಪಟಾಕಿ ಸ್ಫೋಟ: ಇಬ್ಬರ ಸಾವು, ಓರ್ವನ ಸ್ಥಿತಿ ಗಂಭೀರ