ETV Bharat / state

ದಸರಾ ಜಂಬೂ ಸವಾರಿಯಲ್ಲಿ ಅಪ್ಪು ತೇರು.. ಚಾಮರಾಜನಗರದಿಂದ ಪುನೀತ್ ಸ್ತಬ್ಧಚಿತ್ರ

ದಿವಂಗತ ನಟ ಪುನೀತ್ ರಾಜ್​ಕುಮಾರ್ ಅವರಿಗೆ ಸ್ತಬ್ಧ ಚಿತ್ರದ ಮೂಲಕ ಗೌರವ ಸಲ್ಲಿಸಲು ಚಾಮರಾಜನಗರ ಜಿಲ್ಲಾ ಪಂಚಾಯತ್‌ ಮುಂದಾಗಿದೆ.

puneeth theme chariot to Mysore jamboo savari from chamarajanagara
ಚಾಮರಾಜನಗರದಿಂದ ಪುನೀತ್ ಸ್ತಬ್ಧಚಿತ್ರ
author img

By

Published : Oct 5, 2022, 12:09 PM IST

Updated : Oct 5, 2022, 12:22 PM IST

ಚಾಮರಾಜನಗರ: ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿಗೆ ಕ್ಷಣಗಣನೆ ಆರಂಭವಾಗಿದೆ. ಗಡಿ ಜಿಲ್ಲೆ ಚಾಮರಾಜನಗರದಿಂದ ಅಪ್ಪು ಸ್ತಬ್ಧಚಿತ್ರ ಅನ್ನು ರೂಪಿಸಲಾಗಿದೆ.

ಚಾಮರಾಜನಗರ ರಾಯಭಾರಿ ಆಗಿದ್ದ ಹಾಗೂ ಚಾಮರಾಜನಗರದ ತವರಿನ ನಂಟು ಹೊಂದಿದ್ದ ದಿವಂಗತ ನಟ ಪುನೀತ್ ರಾಜ್​ಕುಮಾರ್ ಅವರಿಗೆ ಸ್ತಬ್ಧ ಚಿತ್ರದ ಮೂಲಕ ಗೌರವ ಸಲ್ಲಿಸಲು ಚಾಮರಾಜನಗರ ಜಿಲ್ಲಾ ಪಂಚಾಯತ್‌ ಮುಂದಾಗಿದೆ. ಅಭಿಮಾನಿಗಳು ಅಪ್ಪು ತೇರನ್ನು ಕಣ್ತುಂಬಿಕೊಳ್ಳಲು ಕಾತರರಾಗಿದ್ದಾರೆ.‌

ಚಾಮರಾಜನಗರದಿಂದ ಪುನೀತ್ ಸ್ತಬ್ಧಚಿತ್ರ

ಹನೂರಿನ‌ ಕಲಾವಿದ ಮಹಾದೇವ್ ಎಂಬುವರೊಟ್ಟಿಗೆ 15 ಜನರ ತಂಡ ಈ ಸ್ತಬ್ಧ ಚಿತ್ರ ತಯಾರಿಸಿದ್ದಾರೆ. "ಪ್ರಕೃತಿ ಮಡಿಲಿನ ಹುಲಿ ಮತ್ತು ಆನೆ ಅರಣ್ಯಧಾಮ'' ಎಂದು ಸ್ತಬ್ಧ ಚಿತ್ರಕ್ಕೆ ಹೆಸರಿಡಲಾಗಿದೆ. ಜಿಲ್ಲೆಯ ಪ್ರಕೃತಿ, ವನ್ಯಜೀವಿ ಸಂಪತ್ತು, ಪವಾಡ ಪುರುಷ ಮಲೆ ಮಹದೇಶ್ವರ ಸ್ವಾಮಿಯನ್ನು ಸ್ತಬ್ಧ ಚಿತ್ರದಲ್ಲಿ ಬಿಂಬಿಸಲಾಗಿದೆ.

ಇದನ್ನೂ ಓದಿ: ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಪೂಜೆ ಸಲ್ಲಿಸಿದ ಸಿಎಂ.. ಮೆರವಣಿಗೆಗೆ ಚಾಲನೆ

ಸ್ತಬ್ಧಚಿತ್ರದ ಮುಂಭಾಗ ದೊಡ್ಡ ಹುಲಿಯ ಮುಖ ಇದೆ. ಹಸಿರು ಆವರಿಸಿರುವ ಬೆಟ್ಟ, ಆನೆ ಸೇರಿದಂತೆ ಇತರೆ ಪ್ರಾಣಿಗಳು, ಮಧ್ಯದಲ್ಲಿ ಹುಲಿಯ ಮೇಲೆ ಕುಳಿತಿರುವ ಮಲೆ ಮಹದೇಶ್ವರ ಸ್ವಾಮಿಯ ಪ್ರತಿಕೃತಿ ಹಾಗೂ ಹಿಂಭಾಗದಲ್ಲಿ ಮಂದಸ್ಮಿತ ಪುನೀತ್‌ರಾಜ್‌ಕುಮಾರ್‌ ಅವರ ದೊಡ್ಡ ಪ್ರತಿಕೃತಿ ಅಳವಡಿಸಲಾಗಿದೆ.‌

Last Updated : Oct 5, 2022, 12:22 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.