ಚಾಮರಾಜನಗರ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆ ಬಂಡೀಪುರ ಅರಣ್ಯ ಪ್ರದೇಶದ ಮೂಲಕ ರಾಜ್ಯಕ್ಕೆ ಎಂಟ್ರಿ ಕೊಟ್ಟಿದೆ.
ರಾಹುಲ್ ಗಾಂಧಿ ಅವರನ್ನು ರಾಜ್ಯ ಕಾಂಗ್ರೆಸ್ ನಾಯಕರು ಕೆಕ್ಕನಹಳ್ಳ ಚೆಕ್ ಪೋಸ್ಟ್ ಬಳಿ ತೆರಳಿ ಸ್ವಾಗತಿಸಿದರು. ಈ ವೇಳೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಎಂ.ಬಿ. ಪಾಟೀಲ್, ಆರ್.ವಿ. ದೇಶಪಾಂಡೆ, ವೀರಪ್ಪ ಮೊಯಿಲಿ, ಕೆ.ಜೆ. ಜಾರ್ಜ್ ಸೇರಿದಂತೆ ಹತ್ತು ಹಲವು ನಾಯಕರುಗಳು ಭಾಗಿಯಾಗಿದ್ದರು. ಗುಂಡ್ಲುಪೇಟೆಯ ಹಂಗಳ ಗ್ರಾಮದ ಬಳಿ ದಾರಿ ಮಧ್ಯ ಕಾಫಿ ಕುಡಿಯಲು ಖಾಸಗಿ ರೆಸಾರ್ಟ್ಗೆ ತೆರಳಿದರು.
ಇದನ್ನೂ ಓದಿ: ಇಂದು ಭಾರತ್ ಜೋಡೋ ಯಾತ್ರೆ ರಾಜ್ಯ ಪ್ರವೇಶ: ಗುಂಡ್ಲುಪೇಟೆಯಲ್ಲಿ ಖಾಕಿ ಹೈ ಅಲರ್ಟ್
ಗುಂಡ್ಲುಪೇಟೆ ಪಟ್ಟಣದ ಅಂಬೇಡ್ಕರ್ ಭವನದ ಎದುರು ಬೃಹತ್ ವೇದಿಕೆ ಕಾರ್ಯಕ್ರಮ ನಡೆಯಲಿದ್ದು, ಜನರನ್ನು ಉದ್ದೇಶಿಸಿ ರಾಹುಲ್ ಗಾಂಧಿ ಮಾತನಾಡಲಿದ್ದಾರೆ. ಇದಾದ ಬಳಿಕ, ಪಾದಯಾತ್ರೆ ನಡೆಸಲಿದ್ದು ಸೋಲಿಗರು, ಆಕ್ಸಿಜನ್ ದುರಂತದ ಸಂತ್ರಸ್ತರ ಜೊತೆ ಸಂವಾದ ನಡೆಸಲಿದ್ದಾರೆ.