ETV Bharat / state

ಚಾಮರಾಜನಗರ: 9 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿದವನಿಗೆ 20 ವರ್ಷ ಜೈಲು, 2 ಲಕ್ಷ ರೂ. ದಂಡ - Rape accused 20 years imprisonment

2018ರ ಆಗಸ್ಟ್ 15ರಂದು ಸಂಜೆ ಶಾಲೆಯಲ್ಲಿ ಆಟವಾಡುತ್ತಿದ್ದ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಸದಾಶಿವ ಎಸ್. ಸುಲ್ತಾನ್‍ಪುರಿ ಅವರು ಆರೋಪಿ ರವಿಕುಮಾರ್​ಗೆ 20 ವರ್ಷ ಜೈಲು ಶಿಕ್ಷೆ ವಿಧಿಸಿದ್ದಾರೆ.

rape-accused ravikumar
ಆರೋಪಿ ರವಿಕುಮಾರ್​
author img

By

Published : Aug 12, 2021, 9:57 PM IST

ಚಾಮರಾಜನಗರ: ಯಳಂದೂರು ತಾಲೂಕಿನ ಗ್ರಾಮವೊಂದರ 9 ವರ್ಷದ ಬುದ್ಧಿಮಾಂದ್ಯ ಬಾಲಕಿ ಮೇಲೆ ಅತ್ಯಾಚಾರವೆಸಗಿದವನಿಗೆ 20 ವರ್ಷ ಜೈಲು ಶಿಕ್ಷೆ ಹಾಗೂ 2 ಲಕ್ಷ ರೂ.ದಂಡ ವಿಧಿಸಲಾಗಿದೆ.

ರವಿಕುಮಾರ್(26) ಶಿಕ್ಷೆಗೆ ಗುರಿಯಾದ ಅಪರಾಧಿ. 2018ರ ಆಗಸ್ಟ್ 15ರಂದು ಸಂಜೆ ಶಾಲೆಯಲ್ಲಿ ಆಟವಾಡುತ್ತಿದ್ದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದ‌ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಸದಾಶಿವ ಎಸ್. ಸುಲ್ತಾನ್‍ಪುರಿ ಶಿಕ್ಷೆ ವಿಧಿಸಿ ಆದೇಶಿಸಿದ್ದಾರೆ.

2 ಲಕ್ಷ ರೂ. ದಂಡ ತೆರಲು ತಪ್ಪಿದ್ದಲ್ಲಿ ಒಂದು ವರ್ಷ ಕಠಿಣ ಶಿಕ್ಷೆ ವಿಧಿಸಿ ನ್ಯಾಯಾಧೀಶರು ತೀರ್ಪು ನೀಡಿದ್ದಾರೆ.‌ ಅಪ್ರಾಪ್ತ ನೊಂದ ಬಾಲಕಿಯ ಪುನಶ್ಚೇತನಕ್ಕಾಗಿ ಉಚಿತವಾಗಿ ವೈದ್ಯಕೀಯ ಚಿಕಿತ್ಸೆ ಹಾಗೂ ವಿದ್ಯಾಭ್ಯಾಸಕ್ಕೆ ಬೇಕಾಗುವ ಎಲ್ಲಾ ಸೌಲಭ್ಯಗಳನ್ನು ಸರ್ಕಾರ ಒದಗಿಸುವಂತೆ ನಿರ್ದೇಶಿಸಿ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರವು ಪರಿಹಾರವಾಗಿ 2 ಲಕ್ಷದ 50 ಸಾವಿರ ರೂ. ನೀಡುವಂತೆ ನ್ಯಾಯಾಲಯವು ಆದೇಶಿಸಿದೆ.

ಓದಿ: ರಾಜ್ಯದಲ್ಲಿಂದು1,857 ಮಂದಿಗೆ ಕೋವಿಡ್​ ದೃಢ: 30 ಸೋಂಕಿತರ ಸಾವು

ETV Bharat Logo

Copyright © 2025 Ushodaya Enterprises Pvt. Ltd., All Rights Reserved.