ETV Bharat / state

ದಲಿತ ಎಂಬ ಕಾರಣಕ್ಕೆ ಕ್ಷೌರ ನಿರಾಕರಣೆ.. ಪ್ರಕರಣ ದಾಖಲಿಸಿಕೊಳ್ಳಲು ಪೊಲೀಸರು ಹಿಂದೇಟು ಆರೋಪ

author img

By

Published : Apr 7, 2022, 10:32 AM IST

ಚಾಮರಾಜನಗರ ತಾಲೂಕಿನ‌ ಸಾಗಡೆ ಗ್ರಾಮದಲ್ಲಿ ದಲಿತ ಎಂಬ ಕಾರಣಕ್ಕೆ ಕ್ಷೌರ ನಿರಾಕರಿಸಿರುವ ಅಮಾನವೀಯ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಳ್ಳಲು ಹಿಂದೇಟು ಹಾಕುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಚಾಮರಾಜನಗರ
ಚಾಮರಾಜನಗರ

ಚಾಮರಾಜನಗರ: ದಲಿತ ಎಂಬ ಕಾರಣಕ್ಕೆ ಕ್ಷೌರ ನಿರಾಕರಿಸಿರುವ ಅಮಾನವೀಯ ಘಟನೆ ಚಾಮರಾಜನಗರ ತಾಲೂಕಿನ‌ ಸಾಗಡೆ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಸಾಗಡೆ ಗ್ರಾಮದ ಕಾರ್ತಿಕ್ ಎಂಬ ಯುವಕನಿಗೆ ಜಾತಿ ಕಾರಣದಿಂದ ಕ್ಷೌರ ನಿರಾಕರಿಸಿದ್ದಾರೆ ಎನ್ನಲಾಗಿದ್ದು, ಈ ಸಂಬಂಧ ನೊಂದ ಯುವಕ ಚಾಮರಾಜನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಚಾಮರಾಜನಗರ ಗ್ರಾಮಾಂತರ ಠಾಣೆ ಪೊಲೀಸರಿಗೆ ದೂರು ನೀಡಿದ್ದಾರೆ‌.

ಎಸ್​ಸಿ, ಎಸ್​ಟಿ ದೌರ್ಜನ್ಯ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಸೂಕ್ತ ಕಾನೂನು ಕ್ರಮ ಜರುಗಿಸಬೇಕೆಂದು ಕಾರ್ತಿಕ್ ಒತ್ತಾಯಿಸಿದ್ದಾನೆ. ಈ ಸಂಬಂಧ ನೊಂದ ಯುವಕ ದೂರು ನೀಡಿದ್ರು ಕೂಡ ಪೊಲೀಸರು ಪ್ರಕರಣ ದಾಖಲಿಸಿಕೊಂಡಿಲ್ಲ ಎಂಬ ಆರೋಪಗಳು ಕೇಳಿಬಂದಿವೆ.

ಇದನ್ನೂ ಓದಿ: ರೇಣುಕಾಚಾರ್ಯ ನಕಲಿ ಜಾತಿ ಸರ್ಟಿಫಿಕೇಟ್ ವಿವಾದ: ಕ್ರಮಕ್ಕಾಗಿ ಬೀದಿಗಿಳಿದ ದಲಿತ ಪರ ಸಂಘಟನೆಗಳು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.