ETV Bharat / state

ವೀರಪ್ಪನ್ ಸಹಚರ ಜ್ಞಾನಪ್ರಕಾಶ್ ಬಿಡುಗಡೆ: ಮಾನವೀಯತೆ ಆಧಾರದಲ್ಲಿ ಜಾಮೀನು

ಪಾಲಾರ್ ಬಾಂಬ್ ಸ್ಫೋಟ ಪ್ರಕರಣದ ಮುಖ್ಯ ಆರೋಪಿಯಾಗಿದ್ದ ವೀರಪ್ಪನ್ ಸಹಚರ ಜ್ಞಾನಪ್ರಕಾಶ್​ನನ್ನು ಮಾನವೀಯತೆ ಆಧಾರದಲ್ಲಿ ಜಾಮೀನು ನೀಡಿ ಬಿಡುಗಡೆ ಮಾಡಲಾಗಿದೆ.

Release of Veerappan companion Gnanaprakash
ವೀರಪ್ಪನ್ ಸಹಚರ ಜ್ಞಾನಪ್ರಕಾಶ್ ಬಿಡುಗಡೆ
author img

By

Published : Dec 20, 2022, 11:52 AM IST

ಚಾಮರಾಜನಗರ: ಜೀವಾವಧಿ ಶಿಕ್ಷೆಗೆ ಒಳಗಾಗಿದ್ದ ಕಾಡುಗಳ್ಳ ವೀರಪ್ಪನ್ ಸಹಚರ ಜ್ಞಾನಪ್ರಕಾಶ್ ಇಂದು ಬೆಳಗ್ಗೆ ಮೈಸೂರಿನ ಕೇಂದ್ರ ಕಾರಾಗೃಹದಿಂದ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ.

ಜ್ಞಾನಪ್ರಕಾಶ್ (68) ಹನೂರು ತಾಲೂಕಿನ ಸಂದನಪಾಳ್ಯ ಗ್ರಾಮದ ನಿವಾಸಿಯಾಗಿದ್ದು, ಕಾಡುಗಳ್ಳ ವೀರಪ್ಪನ್ ಮುಖ್ಯ ಸಹಚರಾರಾಗಿದ್ದರು‌. ಭಯಾನಕ ಎನಿಸುವ "ಪಾಲಾರ್ ಬಾಂಬ್ ಸ್ಫೋಟ" ಪ್ರಕರಣದಲ್ಲಿ ಮುಖ್ಯ ಆರೋಪಿಯಾಗಿದ್ದ ಜ್ಞಾನಪ್ರಕಾಶ್ ಅವರಿಗೆ ಗಲ್ಲು ಶಿಕ್ಷೆ ವಿಧಿಸಲಾಗಿತ್ತು. ‌ಬಳಿಕ, ಸುಪ್ರೀಂ ಕೋರ್ಟ್ 2014 ರಲ್ಲಿ ಗಲ್ಲು ಶಿಕ್ಷೆ ಬದಲಿಸಿ ಜೀವಾವಧಿ ಶಿಕ್ಷೆ ವಿಧಿಸಿತ್ತು.

68 ವರ್ಷದ ಜ್ಞಾನಪ್ರಕಾಶ್ 29 ವರ್ಷಗಳಿಂದ ಜೈಲಿನಲ್ಲೇ ಇದ್ದು, ಮೂರು ವರ್ಷಗಳಿಂದ ಶ್ವಾಸಕೋಶ ಕ್ಯಾನ್ಸರ್ ಅವರನ್ನು ಬಾಧಿಸುತ್ತಿದೆ. ಮಾನವೀಯತೆ ಆಧಾರದಲ್ಲಿ ಸುಪ್ರೀಂ ಕೋರ್ಟ್​ ಜಾಮೀನು ಮಂಜೂರು ಮಾಡಿದ್ದರಿಂದ ಚಾಮರಾಜನಗರ ನ್ಯಾಯಾಲಯವು ಇಬ್ಬರಿಂದ ಶೂರಿಟಿ ಪಡೆದು ಸೋಮವಾರ ಜಾಮೀನು ಮಂಜೂರು ಮಾಡಿತ್ತು. ಇಂದು ಬೆಳಗ್ಗೆ ಜಾಮೀನಿನಿಂದ ಜ್ಞಾನಪ್ರಕಾಶ್ ಬಿಡುಗಡೆಯಾಗಿದ್ದು, ಕುಟುಂಬವನ್ನು ಸೇರಿಕೊಂಡಿದ್ದಾರೆ.

ಇದನ್ನೂ ಓದಿ: ಸ್ವಾತಂತ್ರ್ಯ ಸಂಭ್ರಮಕ್ಕೂ ಮುನ್ನ ಶೋಕಗೀತೆ.‌. ವೀರಪ್ಪನ್ ಮಿಣ್ಯಂ ದಾಳಿಗೆ 30 ವರ್ಷ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.