ಚಾಮರಾಜನಗರ: ಜಿಲ್ಲೆಯಲ್ಲಿಂದು 54 ಕೋವಿಡ್ ಪಾಸಿಟಿವ್ ಕೇಸ್ ಪತ್ತೆಯಾಗುವ ಮೂಲಕ ಸೋಂಕಿತರ ಸಂಖ್ಯೆ 5,852ಕ್ಕೆ ಏರಿಕೆಯಾಗಿದೆ.
ಇಂದು 15 ಮಂದಿ ಗುಣಮುಖರಾಗುವ ಮೂಲಕ ಸಕ್ರಿಯ ಪ್ರಕರಣಗಳ ಸಂಖ್ಯೆ 323ಕ್ಕೆ ಏರಿಕೆಯಾಗಿದೆ. 23 ಮಂದಿ ಸೋಂಕಿತರು ಐಸಿಯುನಲ್ಲಿದ್ದು, 122 ಮಂದಿ ಹೋಂ ಐಸೋಲೇಷನ್ನಲ್ಲಿದ್ದಾರೆ. 638 ಮಂದಿ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಿತರ ಮೇಲೆ ಆರೋಗ್ಯ ಇಲಾಖೆ ನಿಗಾ ಇಟ್ಟಿದೆ. ಜಿಲ್ಲೆಯ ಒಟ್ಟು ಪರೀಕ್ಷೆಗಳ ಸಂಖ್ಯೆ 90 ಸಾವಿರ ಸಮೀಪವಿದ್ದು, ವಾರದ ಬಳಿಕ ಸೋಂಕಿತರ ಪ್ರಮಾಣ ಏರಿಕೆಯಾಗಿದೆ.