ETV Bharat / state

ಕೊಳ್ಳೇಗಾಲದಲ್ಲಿ ಬೈಕ್​ಗೆ ಟ್ರ್ಯಾಕ್ಟರ್ ಡಿಕ್ಕಿ : ಕಾನ್ಸ್​​​​ಟೇಬಲ್ ಕಾಲು ಮುರಿತ

author img

By

Published : Apr 2, 2022, 9:06 PM IST

ಕೊಳ್ಳೇಗಾಲ ತಾಲೂಕಿನ ದೊಡ್ಡಿಂದುವಾಡಿ ಸಮೀಪ ಬೈಕ್ ಹಾಗೂ ಟ್ರ್ಯಾಕ್ಟರ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ, ದಂಪತಿ ಗಾಯಗೊಂಡಿರುವ ಘಟನೆ ನಡೆದಿದೆ..

ಕೊಳ್ಳೇಗಾಲದಲ್ಲಿ ಬೈಕ್​ಗೆ ಟ್ರಾಕ್ಟರ್ ಡಿಕ್ಕಿ
ಕೊಳ್ಳೇಗಾಲದಲ್ಲಿ ಬೈಕ್​ಗೆ ಟ್ರಾಕ್ಟರ್ ಡಿಕ್ಕಿ

ಕೊಳ್ಳೇಗಾಲ : ಬೈಕ್ ಹಾಗೂ ಟ್ರ್ಯಾಕ್ಟರ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ, ದಂಪತಿ ಗಾಯಗೊಂಡಿರುವ ಘಟನೆ ಕೊಳ್ಳೇಗಾಲ ತಾಲೂಕಿನ ದೊಡ್ಡಿಂದುವಾಡಿ ಸಮೀಪ ನಡೆದಿದೆ. ಮಾಂಬಳ್ಳಿ ಪೊಲೀಸ್ ಠಾಣೆಯ ಪೊಲೀಸ್ ಕಾನ್ಸ್‌ಸ್ಟೇಬಲ್ ವಿಶ್ವನಾಥ್ ಹಾಗೂ ಅವರ ಪತ್ನಿ ವಾಣಿ ಎಂಬುವರು ಗಾಯಗೊಂಡಿದ್ದಾರೆ.

ದೊಡ್ಡಿಂದುವಾಡಿ ರಸ್ತೆಯಲ್ಲಿ ಬೈಕ್‌ನಲ್ಲಿ ಪ್ರಯಾಣಿಸುವಾಗ ಎದುರಿನಿಂದ ಬಂದ ಟ್ರ್ಯಾಕ್ಟರ್ ಚಾಲಕನ ನಿಯಂತ್ರಿಸಲಾಗದೇ ದಂಪತಿ ಇದ್ದ ಬೈಕ್​​​ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಸದ್ಯ ಹೋಲಿಕ್ರಾಸ್ ಆಸ್ಪತ್ರೆಯಲ್ಲಿ ಇಬ್ಬರು ಗಾಯಾಳುಗಳಿಗೆ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಬೇರೊಂದು ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳಕ್ಕೆ ಕೊಳ್ಳೇಗಾಲ ಗ್ರಾಮಾಂತರ ಪೊಲೀಸರು ಭೇಟಿ ನೀಡಿ, ಮುಂದಿನ ಕ್ರಮ ಕೈಗೊಂಡಿದ್ದಾರೆ.

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.