ಚಾಮರಾಜನಗರ: ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಮಾನಸಿಕ ಅಸ್ವಸ್ಥನೋರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ವೀರನಪುರ ಗೇಟ್ ಬಳಿ ನಡೆದಿದೆ.
ಸಾವನ್ನಪ್ಪಿರುವ ವ್ಯಕ್ತಿ ಕುರಿತು ಯಾವುದೇ ಮಾಹಿತಿ ಲಭ್ಯವಾಗಿಲ್ಲ. ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಕಾರು ಡಿಕ್ಕಿ ಹೊಡೆದು ತಲೆ ಮತ್ತು ಹೊಟ್ಟೆ ಭಾಗಕ್ಕೆ ಬಲವಾದ ಪೆಟ್ಟು ಬಿದ್ದು ವ್ಯಕ್ತಿ ಸಾವನ್ನಪ್ಪಿದ್ದಾನೆ.