ಚಾಮರಾಜನಗರ : ಅರಣ್ಯದೊಳಗೆ ಪ್ರವೇಶ ಮಾಡಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಟ್ರ್ಯಾಕ್ಟರನ್ನು ಅರಣ್ಯಾಧಿಕಾರಿಗಳು ವಶಪಡಿಸಿಕೊಂಡಿರುವ ಘಟನೆ ಹನೂರು ವನ್ಯಜೀವಿ ವಲಯದಲ್ಲಿ ನಡೆದಿದೆ.
ಹನೂರು ವನ್ಯಜೀವಿ ವಲಯದಲ್ಲಿ ಮರಳು ತೆಗೆಯಲು ಹೊಂಚು ಹಾಕುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಆಧರಿಸಿ ವಲಯ ಅರಣ್ಯಾಧಿಕಾರಿ ರಾಜಶೇಖರಪ್ಪ ಕಾರ್ಯಾಚರಣೆ ಕೈಗೊಂಡಿದ್ದರು. ಈ ವೇಳೆ ಅರಣ್ಯದಿಂದ ಮರಳು ತುಂಬಿಕೊಂಡು ಗ್ರಾಮದ ಕಡೆಗೆ ಬರುತ್ತಿದ್ದಾಗ ದಾಳಿ ನಡೆಸಿ ಚಾಲಕ ಹಾಗೂ ಮರಳು ತುಂಬಿದ್ದ ಟ್ರ್ಯಾಕ್ಟರ್ ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ದಾಳಿಯಲ್ಲಿ ಅರಣ್ಯ ರಕ್ಷಕ ಸುಭಾಷ್ ಚಂದ್ರ ಬೋಸ್ಲೆ, ಯಲಗೂರಪ್ಪ ಗುಬ್ಬಿ ಇದ್ದರು.