ಚಾಮರಾಜನಗರ: ಮೈಸೂರು ವಿಶ್ವವಿದ್ಯಾಲಯದ ಸ್ನಾತಕೋತ್ತರ ಕೇಂದ್ರವಾಗಿ ಕಾರ್ಯನಿರ್ವಹಿಸುವ ಚಾಮರಾಜನಗರದ ಡಾ.ಬಿ.ಆರ್.ಅಂಬೇಡ್ಕರ್ ಸ್ನಾತಕೋತ್ತರ ಅಧ್ಯಯನ ಕೇಂದ್ರವನ್ನು ಆವರಣವನ್ನಾಗಿಸಿ ಪ್ರತ್ಯೇಕ ವಿಶ್ವ ವಿದ್ಯಾಲಯ ಮಾಡಲು ಸರ್ಕಾರ ಮುಂದಾಗಿದೆ.
ಮೈಸೂರು ವಿವಿ ಕುಲಪತಿ ಪ್ರೊ. ಜಿ.ಹೇಮಂತ್ ಕುಮಾರ್ ನೇತೃತ್ವದಲ್ಲಿ ವಿಶ್ರಾಂತ ಕುಲಪತಿ ಪ್ರೊ.ವಿ.ಜಿ.ತಳವಾರ್, ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಕುಲಪತಿ ಕೆಂಪರಾಜು, ರಾಜ್ಯ ಉನ್ನತ ಶಿಕ್ಷಣ ಪರಿಷತ್‌ನ ಕಾರ್ಯನಿರ್ವಾಹಕ ನಿರ್ದೇಶಕ ಪ್ರೊ. ಗೋಪಾಲಕೃಷ್ಣ ಜೋಷಿ ಅವರನ್ನು ಸದಸ್ಯರನ್ನು ಒಳಗೊಂಡ ತಂಡ ರಚನೆಯಾಗಿದೆ.
ಎಲ್ಲವೂ ಅಂದುಕೊಂಡಂತೆ ಆದರೆ ಇನ್ನು 15 ದಿನಗಳಲ್ಲಿ ಈ ತಂಡ ಸ್ಥಳ ಪರಿಶೀಲನೆ ಮತ್ತು ಇನ್ನಿತರ ಚಟುವಟಿಕೆಗಳ ಅಧ್ಯಯನ ನಡೆಸಿ ವರದಿ ಸಲ್ಲಿಸಲಿದೆ. ಚಾಮರಾಜನಗರಕ್ಕೆ ಪ್ರತ್ಯೇಕ ವಿವಿ ರಚನೆಯಾದರೆ ಜಿಲ್ಲೆಯ ವಿದ್ಯಾರ್ಥಿಗಳಿಗೆ ಸಾಕಷ್ಟು ಅನುಕೂಲವಾಗಲಿದೆ.
ಇದನ್ನೂ ಓದಿ : ಕೊನೆಗೂ ಮ್ಯಾಪ್ ಡಿಲೀಟ್: ಟ್ವಿಟರ್ ಇಂಡಿಯಾ ಎಂಡಿ ವಿರುದ್ಧ ದೂರು
ಚಾಮರಾಜನಗರ ಹೊರವಲಯದ ಬೇಡರಪುರ ಬಳಿ ಡಾ.ಬಿ.ಆರ್.ಅಂಬೇಡ್ಕರ್ ಸ್ನಾತಕೋತ್ತರ ಅಧ್ಯಯನ ಕೇಂದ್ರವು ಆರಂಭವಾಗಿ 10 ವರ್ಷ ತುಂಬುವ ಮೊದಲೇ ಶೈಕ್ಷಣಿಕವಾಗಿ ಸಾಧಿಸಿದೆ. ಇದರ ಪರಿಣಾಮವಾಗಿ ಸರ್ಕಾರ ಪ್ರತ್ಯೇಕ ವಿವಿ ಸ್ಥಾಪನೆಗಾಗಿ ಮುಂದಾಗಿದೆ.