ಗುಂಡ್ಲುಪೇಟೆ: ಜೂನ್ 16ರಂದು ಲಡಾಕ್‌ನ ಗಲ್ವಾನ್ ವ್ಯಾಲಿಯಲ್ಲಿ ನಡೆದ ಚೀನಾ ವಿರುದ್ಧದ ಹೋರಾಟದಲ್ಲಿ ವೀರ ಮರಣವನ್ನಪ್ಪಿದ ಯೋಧರಿಗೆ ಗುಂಡ್ಲುಪೇಟೆ ಪಟ್ಟಣದಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಅಖಿಲ ಭಾರತ ಕರುನಾಡ ಯುವ ಶಕ್ತಿ ಸಂಘಟನೆ ಗುಂಡ್ಲುಪೇಟೆ ತಾಲೂಕು ಘಟಕ ಮತ್ತು ನನ್ನ ಕನಸು ಟ್ರಸ್ಟ್ ವತಿಯಿಂದ ಸದಸ್ಯರು ಮೊಂಬತ್ತಿ ಬೆಳಗಿ ಯೋಧರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದರು. ನಂತರ ಚೀನಾ ಅಧ್ಯಕ್ಷರ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.
ಸಂಘಟನೆ ತಾಲೂಕು ಅಧ್ಯಕ್ಷ ಅಶೋಕ್ ಮಾತನಾಡಿ, ಇದೊಂದು ಹೇಯ ಕೃತ್ಯ. ಚೀನಾ ವಸ್ತುಗಳನ್ನು ಬಹಿಷ್ಕಾರ ಮಾಡುವ ಮೂಲಕ ಅವರಿಗೆ ಬುದ್ಧಿ ಕಲಿಸಬೇಕು ಎಂದರು.