ಚಾಮರಾಜನಗರ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಸ್ಪತ್ರೆಗೆ ದಾಖಲಾಗಿರುವ ಹಿನ್ನೆಲೆಯಲ್ಲಿ ಅವರ ಆರೋಗ್ಯ ಚೇತರಿಕೆಗಾಗಿ ಕನ್ನಡ ಪರ ಸಂಘಟನೆಯ ಕಾರ್ಯಕರ್ತರು ಚಾಮರಾಜೇಶ್ವರ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥಿಸಿದರು.
ಚಾ.ರಂ.ಶ್ರೀನಿವಾಸ ಗೌಡ ನೇತೃತ್ವದಲ್ಲಿ ಜಮಾವಣೆಗೊಂಡ ಕನ್ನಡಪರ ಸಂಘಟನೆ ಕಾರ್ಯಕರ್ತರು ಚಾಮರಾಜೇಶ್ವರ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬೇಗ ಚೇತರಿಸಿಕೊಳ್ಳುವಂತೆ ಪ್ರಾರ್ಥಿಸಿ ಅರ್ಚನೆ ಮಾಡಿಸಿ, ಬಳಿಕ ದೇವಸ್ಥಾನದ ಮುಖ್ಯ ದ್ವಾರದಲ್ಲಿ ನೂರೆಂಟು ಈಡುಗಾಯಿಯನ್ನು ಒಡೆದರು.
ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿದ್ದ ಕಾಲದಲ್ಲಿ ಸತತವಾಗಿ ಏಳೆಂಟು ಬಾರಿ ಜಿಲ್ಲೆಗೆ ಆಗಮಿಸಿ ಶಾಪಗ್ರಸ್ತ ಜಿಲ್ಲೆ ಎಂಬ ಹಣೆಪಟ್ಟಿಯನ್ನು ತೆಗೆದು ಹಾಕಿದ್ದರು. ಜಿಲ್ಲೆಯ ಅಭಿವೃದ್ಧಿಗೆ ನೂರಾರು ಕೋಟಿ ರೂ. ಅನುದಾನ ನೀಡಿದ್ದರು. ಅವರು ಬೇಗ ಚೇತರಿಸಿಕೊಳ್ಳಬೇಕು ಹಾಗೂ ಇನ್ನೂ ಹೆಚ್ಚಿನ ಆಯಸ್ಸು, ಆರೋಗ್ಯವನ್ನು ಆ ದೇವರು ನೀಡಲಿ ಎಂದು ಪ್ರಾರ್ಥಿಸಿದರು.