ETV Bharat / state

ಸಿದ್ದರಾಮಯ್ಯ ಮತ್ತೊಮ್ಮೆ ಸಿಎಂ ಆಗಬೇಕು: ಶಾಸಕ ಪುಟ್ಟರಂಗಶೆಟ್ಟಿ - MLA Puttarangashetty

ಸಿದ್ದರಾಮಯ್ಯ ಮತ್ತೊಮ್ಮೆ ಮುಖ್ಯಮಂತ್ರಿ ಆಗಬೇಕು- ಚುನಾವಣಾ ಪೂರ್ವವೇ ಸಿದ್ದರಾಮಯ್ಯ ಪರ ಬ್ಯಾಟ್ ಬೀಸಿದ ಶಾಸಕ ಪುಟ್ಟರಂಗಶೆಟ್ಟಿ

MLA Puttarangashetty
ಶಾಸಕ ಪುಟ್ಟರಂಗಶೆಟ್ಟಿ
author img

By

Published : Jan 22, 2023, 5:23 PM IST

ಚಾಮರಾಜನಗರ: ಸಿದ್ದರಾಮಯ್ಯ ಮತ್ತೊಮ್ಮೆ ಸಿಎಂ ಆಗಬೇಕು ಎಂದು ಕಾಂಗ್ರೆಸ್ ಶಾಸಕ ಸಿ‌.ಪುಟ್ಟರಂಗಶೆಟ್ಟಿ ಹೇಳಿದರು. ಚಾಮರಾಜನಗರದಲ್ಲಿ ನಡೆದ ಕುರುಬರ ಸಂಘದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹಿಂದುಳಿದ ವರ್ಗಗಳ ಹರಿಕಾರರು, ನನ್ನ ನೆಚ್ಚಿನ ನಾಯಕರಾದ ಸಿದ್ದರಾಮಯ್ಯ ಅವರು ಮತ್ತೊಮ್ಮೆ ರಾಜ್ಯದ ಮುಖ್ಯಮಂತ್ರಿ ಆಗಬೇಕು.‌ 2013ರಲ್ಲಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ 5 ವರ್ಷಗಳ ಕಾಲ ಹಿಂದುಳಿದ ವರ್ಗಗಳ ಕಲ್ಯಾಣಕ್ಕಾಗಿ ಹೆಚ್ವಿನ ಒತ್ತು ನೀಡಿದ್ದರು ಎಂದರು.

ನಾನು ರಾಜಕೀಯ ನಿವೃತ್ತಿಯಾಗುತ್ತೇನೆ: ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ತಾಲೂಕು ಹಾಗೂ ಜಿಲ್ಲಾ ಕೇಂದ್ರಗಳಲ್ಲಿ ಹಿಂದುಳಿದ ವರ್ಗಗಳ ಸಮುದಾಯ ಭವನಗಳ ನಿರ್ಮಾಣಕ್ಕಾಗಿ ಹೆಚ್ಚಿನ ಅನುದಾನ ನೀಡಿದ್ದರು. ನನ್ನ ಕ್ಷೇತ್ರದಲ್ಲಿ ತಾಲೂಕು ಕುರುಬರ ಸಂಘದ ಸಮುದಾಯ ಭವನಕ್ಕೆ 1 ಕೋಟಿ, ಉಪ್ಪಾರ ಸಮುದಾಯ ಭವನಕ್ಕೆ 2 ಕೋಟಿ ಅಲ್ಲದೇ ಗ್ರಾಮಾಂತರ ಪ್ರದೇಶದಲ್ಲಿ ಸಮುದಾಯ ಭವನ ನಿರ್ಮಾಣಕ್ಕೆ ಆದ್ಯತೆ ನೀಡಿದ್ದರು. ಅವರು ಮತ್ತೆ ಮುಖ್ಯಮಂತ್ರಿಯಾದರೆ ಸಾಮಾಜಿಕ ನ್ಯಾಯ ದೊರೆಯುವುದರಲ್ಲಿ ಯಾವುದೇ ಸಂದೇಹವಿಲ್ಲ. ಅವರು ರಾಜಕೀಯದಿಂದ ನಿವೃತ್ತಿಯಾದರೇ ನಾನು ಸಹ ನಿವೃತ್ತಿಯಾಗುತ್ತೇನೆ ಎಂದರು.

Chamarajanagar
ಕುರುಬರ ಸಂಘದ ಕಾರ್ಯಕ್ರಮ..

ಇದನ್ನೂ ಓದಿ: ಸಿದ್ದರಾಮಯ್ಯ ಮುಂದಿನ ಮುಖ್ಯಮಂತ್ರಿ: ಸ್ವಾಮೀಜಿಗಳ ಭವಿಷ್ಯ

ಸಿದ್ದರಾಮಯ್ಯ ಅವರ ಕೊಡುಗೆ ಅಪಾರ: ಉಪ್ಪಾರ ಸಮುದಾಯದವನಾದ ನಾನು ಮೂರು ಬಾರಿ ಶಾಸಕನಾಗಲು ಸಿದ್ದರಾಮಯ್ಯ ಅವರ ಕೊಡುಗೆ ಅಪಾರ. ತದನಂತರ ನಿರಂತರವಾಗಿ ನಮ್ಮ ಹಕ್ಕುಗಳನ್ನು ರಕ್ಷಣೆ ಮಾಡಿದ್ದಾರೆ. ಅವರ ಜೊತೆಯಲ್ಲಿ ನಾನು ಬೆಳೆದೆ. ಉಪ್ಪಾರ ಸಮಾಜವನ್ನು ಎಸ್​ಟಿಗೆ ಸೇರಿಸಲು ಕುಲಶಾಸ್ತ್ರೀಯ ಆಧ್ಯಯನಕ್ಕೆ ಅವಕಾಶ ಮಾಡಿಕೊಟ್ಟಿದ್ದರು. ಈಗ ಕುಲಶಾಸ್ತ್ರೀಯ ಅಧ್ಯಯನ ಪೂರ್ಣಗೊಂಡಿದೆ. ಅವರ ಅವಧಿಯಲ್ಲಿ ಪೂರ್ಣಗೊಂಡಿದ್ದರೆ ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸಿ ಎಸ್​​ಟಿಗೆ ನಮ್ಮ ಸಮಾಜವನ್ನು ಸೇರ್ಪಡೆ ಮಾಡುತ್ತಿದ್ದರು. 2023ರಲ್ಲಿ ಸಿದ್ದರಾಮಯ್ಯ ಅವರು ಗೆದ್ದು ಮುಖ್ಯಮಂತ್ರಿಯಾಗಬೇಕು. ಅವರು ಸಿಎಂ ಆದರೆ ಬಡವರ ಪರ, ಸಾಮಾಜಿಕ ನ್ಯಾಯದ ಪರ, ಹಿಂದುಳಿದ ವರ್ಗಗಳ ಪರ ಆಡಳಿತ ಕೊಡುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಮಾಜಿ ಸಿಎಂ ಪರ ಬ್ಯಾಟಿಂಗ್: ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತೊಮ್ಮೆ ಮುಖ್ಯಮಂತ್ರಿ ಆಗಬೇಕು ಅಂತ ಜನರ ನಾಡಿ ಮಿಡಿತ ಆಗಿದೆ ಎಂದು ಹಗರಿ ಬೊಮ್ಮನಹಳ್ಳಿ ಶಾಸಕ ಭೀಮಾನಾಯ್ಕ ಇತ್ತೀಚೆಗೆ ಹೇಳಿಕೆ ನೀಡಿದ್ದರು. ಬಳ್ಳಾರಿ ಜಿಲ್ಲೆ ಸಂಡೂರು ತಾಲೂಕಿನ ತೋರಣಗಲ್ಲಿನ ಜಿಂದಾಲ್ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ನಾವು ಹೋದ ಕಡೆಯೆಲ್ಲ ಮುಂದಿನ ಮುಖ್ಯಮಂತ್ರಿಯನ್ನಾಗಿ ಸಿದ್ಧರಾಮಯ್ಯ ಅವರನ್ನ ಮಾಡಬೇಕೆಂದು ಆಗ್ರಹಿಸುತ್ತಿದ್ದಾರೆ. ಅದು ಕೂಡ ನನ್ನ ವೈಯಕ್ತಿಕ ಅಭಿಪ್ರಾಯವೂ ಕೂಡ ಹೌದು ಎಂದಿದ್ದಾರೆ. 75 ವರ್ಷಗಳ ಬಳಿಕ ಕಳೆದ ಐದು ವರ್ಷಗಳ ಅವಧಿ ಪೂರೈಸಿದ ಏಕೈಕ ಮುಖ್ಯಮಂತ್ರಿ ಆಗಿ ಸಿದ್ಧರಾಮಯ್ಯ ಹೊರಹೊಮ್ಮಿದ್ದಾರೆ. ಅಂಥವರು ಕರ್ನಾಟಕ ರಾಜ್ಯಕ್ಕೆ ಬೇಕಾಗಿದ್ದಾರೆ. ದಿವಂಗತ ಡಿ.ದೇವರಾಜ ಅರಸು ಬಳಿಕ ನಾವು ಕಂಡಂತಹ ಅತ್ಯಂತ ಶ್ರೇಷ್ಠ ಮುಖ್ಯಮಂತ್ರಿ ಆಗಿದ್ದಾರೆ ಎಂದು ಶಾಸಕ ಭೀಮಾನಾಯ್ಕ ಹೇಳಿದ್ದಾರೆ.

ಇದನ್ನೂ ಓದಿ: ಸಿದ್ದರಾಮಯ್ಯ ಮತ್ತೊಮ್ಮೆ ಸಿಎಂ ಆಗ್ಬೇಕಂತ ಜನರ ನಾಡಿಮಿಡಿತ ಆಗಿದೆ: ಮಾಜಿ ಸಿಎಂ ಪರ ಬ್ಯಾಟಿಂಗ್ ಶುರು

ETV Bharat Logo

Copyright © 2025 Ushodaya Enterprises Pvt. Ltd., All Rights Reserved.