ಚಾಮರಾಜನಗರ: ಚೆಕ್ಪೋಸ್ಟ್ನಲ್ಲಿ ಕರ್ತವ್ಯ ಲೋಪ ಎಸಗಿದ ಆರೋಪದ ಮೇಲೆ 6 ಮಂದಿ ನೌಕರರನ್ಜು ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.
ಕೊರೊನಾ ವೈರಸ್ ಹರಡದಂತೆ ಮುಂಜಾಗ್ರತಾ ಕ್ರಮವಾಗಿ ಸ್ಥಾಪಿಸಲಾಗಿರುವ ಹೆಗ್ಗವಾಡಿ ಕ್ರಾಸ್ ಚೆಕ್ಪೋಸ್ಟ್ನಲ್ಲಿ ಡಿಸಿ ಗಮನಕ್ಕೆ ತರದೇ ಹಾಗೂ ಪೂರ್ವಾನುಮತಿ ಪಡೆಯದೇ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಚೆಕ್‍ಪೋಸ್ಟ್ ಮೂಲಕ ಹಾದುಹೋಗಲು ಅವಕಾಶ ಕಲ್ಪಿಸಿದ್ದ ಹಿನ್ನೆಲೆಯಲ್ಲಿ ಮೊದಲನೇ ಮತ್ತು ಎರಡನೇ ಪಾಳಿಯಲ್ಲಿ ಕಾರ್ಯ ನಿರ್ವಹಿಸಿದ್ದ ಈ 6 ಮಂದಿ ನೌಕರರು 23 ವಾಹನಗಳನ್ನು ಬಿಟ್ಟಿರುವುದರಿಂದ ಅಮಾನತು ಮಾಡಿದ್ದಾರೆ ಎನ್ನಲಾಗಿದೆ.
ಸಾರ್ವಜನಿಕರ ಆರೋಗ್ಯದ ಹಿತದೃಷ್ಠಿಯಿಂದ ಸರ್ಕಾರದ ಮಾರ್ಗಸೂಚಿ ಅನ್ವಯ ಜೀವನಾವಶ್ಯಕ ವಸ್ತುಗಳನ್ನು ಮಾತ್ರ ಸಾಗಿಸಲು ಅವಕಾಶವಿದೆ. ಆದರೆ ಈ ನೌಕರರು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಹಾದುಹೋಗಲು ಅವಕಾಶ ಕಲ್ಪಿಸಿದ್ದರಿಂದ ಈ ಕಠಿಣ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿದು ಬಂದಿದೆ.