ಚಾಮರಾಜನಗರ: ಆಹಾರ ಅರಸಿ ಕಾಡಿನಿಂದ ನಾಡಿಗೆ ಬಂದಿದ್ದ ಜಿಂಕೆಯ ಮೇಲೆ ಬೀದಿನಾಯಿಗಳು ದಾಳಿ ನಡೆಸಿ ಕೊಂದು ಹಾಕಿರುವ ಘಟನೆ ಹನೂರು ತಾಲೂಕಿನ ಕಣ್ಣೂರು ಗ್ರಾಮದಲ್ಲಿ ನಡೆದಿದೆ.

ಕಣ್ಣೂರು ಗ್ರಾಮದ ಮಠದ ಬೀದಿಯಲ್ಲಿ ಕಾಣಿಸಿಕೊಂಡ ಜಿಂಕೆಯನ್ನು ಬೀದಿನಾಯಿಗಳು ಕಚ್ಚಿ ಗಾಯಗೊಳಿಸಿದ ಪರಿಣಾಮ ಜಿಂಕೆ ಸ್ಥಳದಲ್ಲೇ ಮೃತಪಟ್ಟಿದೆ. ಈ ಬಗ್ಗೆ ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷ ವೃಷಭೇಂದ್ರಸ್ವಾಮಿ ಅರಣ್ಯಾಧಿಕಾರಿಗಳಿಗೆ ಮಾಹಿತಿ ತಿಳಿಸಿದ್ದಾರೆ.
ಗ್ರಾಮಕ್ಕೆ ಬಂದ ಜಿಂಕೆ ಮೃತಪಟ್ಟಿದ್ದರಿಂದ ಮರುಗಿದ ಗ್ರಾಮಸ್ಥರು, ಜಿಂಕೆಯ ಪಾರ್ಥಿವ ಶರೀರಕ್ಕೆ ಪೂಜೆ ಸಲ್ಲಿಸಿದ್ದಾರೆ.
ಓದಿ: ಮೊಬೈಲ್ನಲ್ಲಿ ಅಶ್ಲೀಲ ವಿಡಿಯೋ ನೋಡಿ 6ರ ಬಾಲಕಿ ಮೇಲೆ ಅತ್ಯಾಚಾರ ಎಸಗಿದ 12ರ ಬಾಲಕ!