ಚಾಮರಾಜನಗರ: ಪರೀಕ್ಷಾ ಕೇಂದ್ರಕ್ಕೆ ತೆರಳುವ ಭರದಲ್ಲಿ ನಗರದ ವಿದ್ಯಾರ್ಥಿನಿಯೊಬ್ಬಳು ಬಿದ್ದು ಹಣೆಗೆ ಗಾಯ ಮಾಡಿಕೊಂಡಿರುವ ಘಟನೆ ನಡೆದಿದೆ.
ನಗರದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆಯಬೇಕಿದ್ದ ಬೀಬಿ ಹಾಜೀರ ಎಂಬ ವಿದ್ಯಾರ್ಥಿನಿ ಬಿದ್ದು ಗಾಯ ಮಾಡಿಕೊಂಡಿದ್ದಾಳೆ. ಪರೀಕ್ಷೆ ಬರೆಯಲು ಬರುವ ಭರದಲ್ಲಿ ಮನೆಯ ಬಳಿ ಆಯ ತಪ್ಪಿ ಬಿದ್ದು ಹಣೆಗೆ ಗಾಯ ಮಾಡಿಕೊಂಡಿದ್ದಳು. ನಂತರ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದು ಪೋಷಕರೊಂದಿಗೆ ಕೇಂದ್ರಕ್ಕೆ ಬಂದ ವಿದ್ಯಾರ್ಥಿನಿ, ಥರ್ಮಲ್ ಸ್ಕ್ರೀನಿಂಗ್ಗೆ ಒಳಾಗುವ ವೇಳೆ ಮತ್ತೆ ಅಸ್ವಸ್ಥಗೊಂಡಿದ್ದಾಳೆ.
ಆಯ ತಪ್ಪಿ ಬಿದ್ದು ವಿದ್ಯಾರ್ಥಿನಿ ಹಣೆಗೆ ಗಾಯ... ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ - ಚಾಮರಾಜನಗರದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ
ನಗರದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಕೇಂದ್ರದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ಬರೆಯಲು ಮಾರುದ್ದ ಸಾಲುಗಟ್ಟಿ ನಿಂತಿದ್ದ ವಿದ್ಯಾರ್ಥಿಗಳನ್ನು ಕಂಡ ಜಿಲ್ಲಾಧಿಕಾರಿ ಡಾ. ಎಂ.ಆರ್.ರವಿ ಸ್ಥಳದಲ್ಲಿದ್ದ ಡಿಡಿಪಿಐ ಜವರೇಗೌಡರನ್ನು ತರಾಟೆಗೆ ತೆಗೆದುಕೊಂಡರು.