ETV Bharat / state

ಜಮೀನಿನಲ್ಲಿ ವ್ಯಕ್ತಿಯ ಶವ ಪತ್ತೆ: ಬಾಯಿಗೆ ಬಟ್ಟೆ ತುರುಕಿ ನೇಣು ಹಾಕಿರುವ ಶಂಕೆ - Murder

ವ್ಯಕ್ತಿಯೊಬ್ಬನಿಗೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹೊಡೆದು ಬಾಯಿಗೆ ಬಟ್ಟೆ ತುರುಕಿ ನೇಣು ಹಾಕಿದ್ದಾರೆ ಎನ್ನಲಾದ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಆದರೆ ಈ ಸಂಬಂಧ ಕುಟುಂಬದವರು ಯಾವುದೇ ಅನುಮಾನ ವ್ಯಕ್ತಪಡಿಸುತ್ತಿಲ್ಲ ಎಂದು ತಿಳಿದುಬಂದಿದೆ.

Chamarajnagar
ಜಮೀನಿನಲ್ಲಿ ವ್ಯಕ್ತಿಯ ಶವ ಪತ್ತೆ
author img

By

Published : May 9, 2021, 1:06 PM IST

ಚಾಮರಾಜನಗರ: ಜಮೀನಲ್ಲಿ ಮಲಗಲು ತೆರಳಿದ್ದ ವ್ಯಕ್ತಿವೋರ್ವನಿಗೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹೊಡೆದು ಬಾಯಿಗೆ ಬಟ್ಟೆ ತುರುಕಿ ನೇಣು ಹಾಕಿರುವ ಆರೋಪ ಪ್ರಕರಣ ತಾಲೂಕಿನ ಉಗನೇದಹುಂಡಿ ಗ್ರಾಮದಲ್ಲಿ ಶನಿವಾರ ರಾತ್ರಿ ನಡೆದಿದೆ.

chamarajnagar
ವ್ಯಕ್ತಿಯ ಶವ ಪತ್ತೆ: ಬಾಯಿಗೆ ಬಟ್ಟೆ ತುರುಕಿ ನೇಣು ಹಾಕಿದ ಶಂಕೆ

ಕೆಂಪಿಸಿದ್ದೇನಹುಂಡಿ ಗ್ರಾಮದ ಬೆಳ್ಳೇಗೌಡ ಎಂಬವರ ಪುತ್ರ ಶಿವಣ್ಣ (36) ಮೃತ ವ್ಯಕ್ತಿ. ಶಿವಣ್ಣ ಶನಿವಾರ ರಾತ್ರಿ ಜಮೀನಿನಲ್ಲಿ ಮಗಲು ತೆರಳಿದ ವೇಳೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಬಾಯಿಗೆ ಬಟ್ಟೆ ತುರುಕಿ ಕೊಲೆ ಮಾಡಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ. ಆದರೆ ಈ ಸಂಬಂಧ ಕುಟುಂಬದವರು ಯಾವುದೇ ಅನುಮಾನ ವ್ಯಕ್ತಪಡಿಸುತ್ತಿಲ್ಲ ಎಂದು ತಿಳಿದುಬಂದಿದೆ.

ಸ್ಥಳಕ್ಕೆ ಗ್ರಾಮಾಂತರ ಠಾಣೆಯ ಪೊಲೀಸರು ಭೇಟಿ ನೀಡಿದ್ದಾರೆ. ತನಿಖೆಯ ನಂತರವೇ ಕೊಲೆಯ ಬಗೆಗಿನ ಸತ್ಯ ಗೊತ್ತಾಗಲಿದೆ ಎಂದು ಗ್ರಾಮಾಂತರ ಪೊಲೀಸ್‌ ಠಾಣೆಯ ಅಪರಾಧ ವಿಭಾಗದ ಸಬ್ ಇನ್ಸ್​ಪೆಕ್ಟರ್ ರಾಜನಾಯಕ್ ಮಾಹಿತಿ ನೀಡಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.