ETV Bharat / state

ಇಂದು ತಾವರೆಕಟ್ಟೆ ಮಹದೇಶ್ವರ ಜಾತ್ರೆ: ಭಕ್ತರಿಗಿಲ್ಲ ಪ್ರವೇಶ

ತಾವರಕಟ್ಟೆ ಮಹದೇಶ್ವರ ಸ್ವಾಮಿ ಜಾತ್ರೆಗೆ ಕೋವಿಡ್ ಹಿನ್ನೆಲೆಯಲ್ಲಿ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧಿಸಲಾಗಿದೆ. ಇನ್ನು ಕನಿಷ್ಠ 100-200 ಮಂದಿಗೆ ಜಾತ್ರೋತ್ಸವದಲ್ಲಿ ಪಾಲ್ಗೊಳ್ಳಲು ಅವಕಾಶ ನೀಡಲಾಗಿದೆ.

Chamarajnagar
ಚಾಮರಾಜನಗರ
author img

By

Published : Mar 12, 2021, 11:57 AM IST

ಚಾಮರಾಜನಗರ: ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ರಾಷ್ಟ್ರೀಯ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಗೆ ಒಳಪಡುವ ತಾವರಕಟ್ಟೆ ಮಹದೇಶ್ವರ ಸ್ವಾಮಿ ಜಾತ್ರೆಗೆ ಕೋವಿಡ್ ಹಿನ್ನೆಲೆಯಲ್ಲಿ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧಿಸಲಾಗಿದೆ.

ಜಾತ್ರೋತ್ಸವದ‌ ಪ್ರಯುಕ್ತ ನಡೆಯುವ ವಿಶೇಷ ಪೂಜೆಯಲ್ಲಿ ದೇವಸ್ಥಾನದ ಅರ್ಚಕರು, ಸರ್ಕಾರಿ ಕೆಲಸದ ನಿಮಿತ್ತ ತೆರಳುವ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳನ್ನು ಹೊರತುಪಡಿಸಿ ಜಿಲ್ಲೆಯ ಹಾಗೂ ಅಂತರ್​ ಜಿಲ್ಲೆಯ ಸಾರ್ವಜನಿಕರ ಹಾಗೂ ಭಕ್ತರ ಪ್ರವೇಶಕ್ಕೆ ನಿರ್ಬಂಧ ವಿಧಿಸಿ ಡಿಸಿ ಆದೇಶಿಸಿದ್ದಾರೆ.

ಕನಿಷ್ಠ 100-200 ಮಂದಿಗೆ ಜಾತ್ರೋತ್ಸವದಲ್ಲಿ ಪಾಲ್ಗೊಳ್ಳಲು ಅವಕಾಶ ನೀಡಲಾಗಿದ್ದು, ಜಾತ್ರೆಯಲ್ಲಿ ಪಾಲ್ಗೊಳ್ಳವವರು ಕಡ್ಡಾಯವಾಗಿ ಮಾಸ್ಕ್ ಧರಿಸುವುದು ಹಾಗೂ ಎಲ್ಲ ಮುಂಜಾಗ್ರತಾ ಕ್ರಮಗಳನ್ನು ವಹಿಸುವಂತೆ ಆದೇಶದಲ್ಲಿ ತಿಳಿಸಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.