ಕೊಳ್ಳೇಗಾಲ: ಅನಾರೋಗ್ಯದಿಂದ ಬೇಸತ್ತ ಶಿಕ್ಷಕಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಸಿಂಗನಲ್ಲೂರು ಗ್ರಾಮದಲ್ಲಿ ನಡೆದಿದೆ.
ಓದಿ: ಠಾಣೆಗೆ ಕರೆದು ದಲಿತ ಯುವಕನಿಗೆ ಮೂತ್ರ ಕುಡಿಸಿದ ಪಿಎಸ್ಐ; ಸಾಮಾಜಿಕ ಜಾಲತಾಣದಲ್ಲಿ ತೀವ್ರ ಆಕ್ರೋಶ
ತಾಲೂಕಿನ ಸಿಂಗನಲ್ಲೂರು ಗ್ರಾಮದ ಶಿಕ್ಷಕಿ ರಮ್ಯ (28) ಎಂಬಾಕೆ ಮೃತ ದುರ್ದೈವಿ. ಪಟ್ಟಣದ ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಈಕೆಗೆ, ಅನೇಕ ದಿನಗಳಿಂದ ಹೊಟ್ಟೆನೋವು ಕಾಣಿಸಿಕೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇತ್ತೀಚೆಗೆ ನೋವು ಹೆಚ್ಚು ಕಾಣಿಸಿಕೊಂಡ ಕಾರಣ ಮನೆಯ ಕೊಠಡಿಯ ಫ್ಯಾನ್ಗೆ ಸೀರೆಯಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.