ಚಾಮರಾಜನಗರ: ಹುಟ್ಟುಹಬ್ಬದ ದಿನವೇ ಉಪನ್ಯಾಸಕಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಗರದಲ್ಲಿ ನಡೆದಿದೆ. ಯಳಂದೂರು ತಾಲೂಕಿನ ಅಂಬಳೆ ಗ್ರಾಮದ ಚಂದನಾ (26) ಮೃತರು.
ಚಾಮರಾಜನಗರದ ಜೆಎಸ್ಎಸ್ ಮಹಿಳಾ ಕಾಲೇಜಿನ ಉಪನ್ಯಾಸಕಿಯಾಗಿದ್ದ ಇವರು, ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
![ಉಪನ್ಯಾಸಕಿ ಚಂದನಾ](https://etvbharatimages.akamaized.net/etvbharat/prod-images/kn-cnr-02-sucied-av-ka10038_09082022145008_0908f_1660036808_276.jpg)
ಮಾನಸಿಕ ಒತ್ತಡದಿಂದ ತಾನು ಆತ್ಮಹತ್ಯೆ ಮಾಡಿಕೊಂಡಿದ್ದು, ತನ್ನ ಸಾವಿಗೆ ಯಾರೂ ಕಾರಣರಲ್ಲ ಎಂದು ಬರೆದುಕೊಂಡಿದ್ದಾರೆ. ಮೃತದೇಹವನ್ನು ಚಾಮರಾಜನಗರ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಚಾಮರಾಜನಗರ ಪಟ್ಟಣ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಓದಿ: ಹುಬ್ಬಳ್ಳಿಯಲ್ಲಿ ಮೀಟರ್ ಬಡ್ಡಿ ಕುಳಗಳ ಅಟ್ಟಹಾಸ: ದೂರು ದಾಖಲಾಗಿದ್ದರೂ ಸಿಕ್ಕಿಲ್ಲ ಕಿಂಗ್ ಫಿನ್ಸ್..!