ETV Bharat / state

ಶಬರಿಮಲೆಗೆ ತೆರಳುತ್ತಿದ್ದ ಟೆಂಪೋ ಪಲ್ಟಿ... ಅಪಶಕುನವೆಂದು ಯಾತ್ರೆ ರದ್ದು!

ಶಬರಿಮಲೆಗೆ ತೆರಳುತ್ತಿದ್ದ ಯಾತ್ರಾರ್ಥಿಗಳ ಟೆಂಪೋ ಟ್ರಾವೆಲರ್​ವೊಂದು ಪಲ್ಟಿಯಾಗಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ರಾಘವಪುರದ ಬಳಿ ನಡೆದಿದ್ದು, ತಮ್ಮ ಯಾತ್ರೆಯನ್ನು ಸ್ಥಗಿತಗೊಳಿಸಿ ನಂಜನಗೂಡಿನ ಅಯ್ಯಪ್ಪಸ್ವಾಮಿ ದೇಗುಲಕ್ಕೆ ತೆರಳಿದ್ದಾರೆ.

Tempo Traveller overturned which on the way to Sabarimala
ಶಬರಿಮಲೆಗೆ ತೆರಳುತ್ತಿದ್ದ ಟೆಂಪೋ ಟ್ರಾವೆಲ್ಲರ್​ ಪಲ್ಟಿ....ಅಪಶಕುನವೆಂದು ಯಾತ್ರೆ ರದ್ದು!
author img

By

Published : Jan 18, 2020, 1:11 PM IST

ಚಾಮರಾಜನಗರ: ಶಬರಿಮಲೆಗೆ ತೆರಳುತ್ತಿದ್ದ ಯಾತ್ರಾರ್ಥಿಗಳ ಟೆಂಪೋ ಟ್ರಾವೆಲರ್​ವೊಂದು ಪಲ್ಟಿಯಾಗಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ರಾಘವಪುರದ ಬಳಿ ನಡೆದಿದ್ದು, ತಮ್ಮ ಯಾತ್ರೆಯನ್ನು ಸ್ಥಗಿತಗೊಳಿಸಿದ್ದಾರೆ.

ಮುಂದೆ ತೆರಳುತ್ತಿದ್ದ ಪಿಕ್ ಅಪ್ ವಾಹನಕ್ಕೆ ಡಿಕ್ಕಿಯಾಗುವುದನ್ನು ತಪ್ಪಿಸಲು ಮುಂದಾದಾಗ ಟೆಂಪೋ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಘಟನೆಯಲ್ಲಿ ಚಾಲಕನಿಗೆ ಗಂಭೀರ ಗಾಯಗಳಾಗಿವೆ. ಬೆಂಗಳೂರಿನ ಮಾಗಡಿಯಿಂದ ಶಬರಿಮಲೆಗೆ 11 ಮಂದಿ ಮಾಲಾಧಾರಿಗಳು ತೆರಳುತ್ತಿದ್ದರು ಎಂದು ತಿಳಿದುಬಂದಿದೆ.

ಅದೃಷ್ಟವಶಾತ್ ಎಲ್ಲಾ ಯಾತ್ರಾರ್ಥಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ, ವಾಹನ ಪಲ್ಟಿಯಾಗಿದ್ದರಿಂದ ಅಪಶಕುನವೆಂದು ಭಾವಿಸಿ ಶಬರಿಮಲೆ ಯಾತ್ರೆ ಮೊಟಕುಗೊಳಿಸಿ ನಂಜನಗೂಡಿನ ಅಯ್ಯಪ್ಪಸ್ವಾಮಿ ದೇಗುಲಕ್ಕೆ ತೆರಳಿದ್ದಾರೆ. ಸದ್ಯ ಈ ಕುರಿತು ಬೇಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:ಶಬರಿಮಲೆಗೆ ತೆರಳುತ್ತಿದ್ದ ಟಿಟಿ ಪಲ್ಟಿ...ಚಾಲಕನಿಗೆ ಗಾಯ- ಅಪಶಕುನವೆಂದು ಯಾತ್ರೆ ರದ್ದು!

ಚಾಮರಾಜನಗರ: ಶಬರಿಮಲೆಗೆ ತೆರಳುತ್ತಿದ್ದ ಯಾತ್ರಾರ್ಥಿಗಳ ಟೆಂಪೋ ಟ್ರಾವೆಲ್ಲರ್ ವೊಂದು ಪಲ್ಟಿಯಾಗಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ರಾಘವಪುರದ ಬಳಿ ನಡೆದಿದೆ.

Body:ಮುಂದೆ ತೆರಳುತ್ತಿದ್ದ ಪಿಕ್ ಅಪ್ ವಾಹನಕ್ಕೆ ಡಿಕ್ಕಿಯಾಗುವುದನ್ನು ತಪ್ಪಿಸುವಾಗ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು ಘಟನೆಯಲ್ಲಿ ಚಾಲಕನಿಗೆ ಗಂಭೀರ ಪೆಟ್ಟಾಗಿದೆ. ಬೆಂಗಳೂರಿನ ಮಾಗಡಿಯಿಂದ ಶಬರಿಮಲೆಗೆ 11 ಮಂದಿ ಮಾಲಾಧಾರಿಗಳು ತೆರಳುತ್ತಿದ್ದರು ಎಂದು ತಿಳಿದುಬಂದಿದೆ.

ಅದೃಷ್ಟವಶಾತ್ ಎಲ್ಲಾ ಯಾತ್ರಾರ್ಥಿಗಳು ಪ್ರಾಣಾಪಾಯದಿಂದ ಪಾರಾಗಿದ್ದು ವಾಹನ ಪಲ್ಟಿಯಾಗಿದ್ದರಿಂದ ಅಪಶಕುನವೆಂದು ಭಾವಿಸಿ ಶಬರಿಮಲೆ ಯಾತ್ರೆ ಮೊಟಕುಗೊಳಿಸಿ ನಂಜನಗೂಡಿನ ಅಯ್ಯಪ್ಪಸ್ವಾಮಿ ದೇಗುಲಕ್ಕೆ ತೆರಳಿದ್ದಾರೆ.
Conclusion:
ಸದ್ಯ, ಬೇಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ETV Bharat Logo

Copyright © 2024 Ushodaya Enterprises Pvt. Ltd., All Rights Reserved.