ಚಾಮರಾಜನಗರ: ಅಪಘಾತದಲ್ಲಿ ಮೃತಪಟ್ಟ ಮಗನ ಕಣ್ಣುಗಳನ್ನು ಪೋಷಕರು ದಾನ ಮಾಡುವ ಮೂಲಕ ಯುವಕನ ಕೊನೆ ಬಯಕೆಯನ್ನು ಈಡೇರಿಸಿದ್ದು, ಸಾವಿನಲ್ಲೂ ಯುವಕ ಸಾರ್ಥಕತೆ ಮೆರೆದಿದ್ದಾರೆ.
ಚಂದ್ರಶೇಖರ್(21) ಮೃತ ಯುವಕ. ಹನೂರು ತಾಲ್ಲೂಕಿನ ಚಿಕ್ಕರಂಗಶೆಟ್ಟಿ ದೊಡ್ಡಿ ಗ್ರಾಮದ ನಿವಾಸಿಯಾಗಿರುವ ನಂಜುಂಡಸ್ವಾಮಿ ಅವರ ಪುತ್ರ ಚಂದ್ರಶೇಖರ್ ಡಿಪ್ಲೋಮಾ ಮುಗಿಸಿ ಇಂಜಿನಿಯರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು.
ಮಂಗಳವಾರ ಮೈಸೂರಿನಲ್ಲಿ ಸ್ನೇಹಿತನ ಹುಟ್ಟುಹಬ್ಬ ಆಚರಣೆಗೆ ಹೋಗಿ ಮನೆಗೆ ಹಿಂದಿರುಗುವ ಸಮಯದಲ್ಲಿ ನಡೆದ ಅಪಘಾತದಲ್ಲಿ ಚಂದ್ರಶೇಖರ್ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಚಂದ್ರಶೇಖರ್ ಕೊನೆಯುಸಿರೆಳೆದಿದ್ದು, ತಂದೆ ನಂಜುಂಡಸ್ವಾಮಿ ಮೃತ ಮಗನ ಬಯಕೆಯಂತೆ ನೇತ್ರಗಳನ್ನು ಲಯನ್ಸ್ ಕಣ್ಣಿನ ಆಸ್ಪತ್ರೆಗೆ ದಾನ ಮಾಡಿದ್ದಾರೆ.
ಇದನ್ನೂ ಓದಿ: ಅಪಘಾತದಲ್ಲಿ ಯುವಕನ ಮೆದುಳು ನಿಷ್ಕ್ರಿಯ; ಅಂಗಾಂಗ ದಾನಕ್ಕೆ ಮುಂದಾದ ಕುಟುಂಬ