ಚಾಮರಾಜನಗರ: ರುದ್ರಾಕ್ಷಿಯೊಂದಿಗೆ ಹುಲಿ ಉಗುರು ಮತ್ತು ನರಿ ಹಲ್ಲುಗಳನ್ನು ಮಾರಾಟ ಮಾಡುತ್ತಿದ್ದ ಅಲೆಮಾರಿ ಹಕ್ಕಿ ಪಿಕ್ಕಿ ಜನಾಂಗದ ಇಬ್ಬರನ್ನು ಗುಂಡ್ಲುಪೇಟೆಯಲ್ಲಿ ಪೊಲೀಸರು ಬಂಧಿಸಿದ್ದಾರೆ.
ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಅಂಗಡಿ ಗ್ರಾಮದ ಧವನ್ ಮತ್ತು ಗೋಕುಲ್ ಬಂಧಿತ ಆರೋಪಿಗಳು.
ಆರೋಪಿಗಳು ಗುಂಡ್ಲುಪೇಟೆ ಪಟ್ಟಣ ಹಾಗೂ ಬೇಗೂರು ಭಾಗದಲ್ಲಿ ಹುಲಿ ಉಗುರು ಮತ್ತು ನರಿ ಹಲ್ಲುಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದರು ಎನ್ನಲಾಗಿದೆ. ಈ ಬಗ್ಗೆ ಖಚಿತ ಮಾಹಿತಿ ಪಡೆದ ಗುಂಡ್ಲುಪೇಟೆ ಆರ್ಎಫ್ಒ ಲೋಕೇಶ ಮತ್ತು ತಂಡ ದಾಳಿ ನಡೆಸಿ ಬಂಧಿಸಿದ್ದಾರೆ.
ಬಂಧಿತರಿಂದ 6 ಹುಲಿ ಉಗುರು, 7 ನರಿ ಹಲ್ಲುಗಳನ್ನು ವಶಪಡಿಸಿಕೊಂಡು ಹೆಚ್ಚಿನ ವಿಚಾರಣೆಗೆ ಒಳಪಡಿಸಲಾಗಿದೆ.