ETV Bharat / state

ಯಮರೂಪಿ ಟಿಪ್ಪರ್ ಡಿಕ್ಕಿ: ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವು - ಚಾಮರಾಜನಗರದಲ್ಲಿ ರಸ್ತೆ ಅಪಘಾತ

ತೆರಳುತ್ತಿದ್ದ ಬೈಕ್​ಗೆ ಟಿಪ್ಪರ್​ ಡಿಕ್ಕಿ ಹೊಡೆದಿದೆ. ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಾಮರಾಜನಗರದ ಸಿದ್ಧಾರ್ಥ ಚಿತ್ರಮಂದಿರ ಸಮೀಪ ನಡೆದಿದೆ.

ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವು
two youths died in Chamarajanagar
author img

By

Published : Jan 9, 2021, 6:04 PM IST

ಚಾಮರಾಜನಗರ: ಬೈಕಿನಲ್ಲಿ ತೆರಳುತ್ತಿದ್ದವರಿಗೆ ಹಿಂಬದಿಯಿಂದ ಟಿಪ್ಪರ್ ಡಿಕ್ಕಿ ಹೊಡೆದಿದ್ದು, ಸ್ಥಳದಲ್ಲೇ ಇಬ್ಬರು ಯುವಕರು ಮೃತಪಟ್ಟಿರುವ ಘಟನೆ ಚಾಮರಾಜನಗರದ ಸಿದ್ಧಾರ್ಥ ಚಿತ್ರಮಂದಿರ ಸಮೀಪ ನಡೆದಿದೆ.

ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವು

ಹೊಂಗನೂರು ಗ್ರಾಮದ ನಟರಾಜು ಹಾಗೂ ಬ್ಯಾಡಮೂಡ್ಲು ಗ್ರಾಮದ ಮಲ್ಲ ಮೃತಪಟ್ಟ ಯುವಕರು. ಇವರು ಬೈಕಿನಲ್ಲಿ ಊರಿನತ್ತ ತೆರಳುತ್ತಿದ್ದರು. ಈ ವೇಳೆ ಹಿಂಬದಿಯಿಂದ ಬಂದ ಟಿಪ್ಪರ್ ಡಿಕ್ಕಿಯಾಗಿ ರಸ್ತೆಗೆ ಬಿದ್ದಿದ್ದಾರೆ. ಪರಿಣಾಮ ಇಬ್ಬರೂ ಅಸುನೀಗಿದ್ದಾರೆ. ಈ ಸಂಬಂಧ ಟಿಪ್ಪರ್ ಹಾಗೂ ಚಾಲಕನನ್ನು ಸಂಚಾರಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಸದ್ಯ ಶವಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ‌

ETV Bharat Logo

Copyright © 2025 Ushodaya Enterprises Pvt. Ltd., All Rights Reserved.