ಮೈಸೂರು: ಜಿಲ್ಲೆಯಲ್ಲಿಂದು 204 ಹೊಸ ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ.
ಇಂದು 375 ಕೊರೊನಾ ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದು, ಇದುವರೆಗೂ 44,550 ಮಂದಿ ಕೊರೊನಾ ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆದಂತಾಗಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 1,900 ಇದೆ.
ಮೈಸೂರಿನಲ್ಲಿಂದು ಇಬ್ಬರು ಕೊರೊನಾ ಸೋಂಕಿತರು ಸಾವನ್ನಪ್ಪಿದ್ದಾರೆ. ಇದುವರೆಗೆ 955 ಮಂದಿ ಕೊರೊನಾ ಸೋಂಕಿತರು ಮೃತಪಟ್ಟಿದ್ದಾರೆ
ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಇಂದು 41 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 224 ಸೋಂಕಿತರು ಸಂಪೂರ್ಣ ಗುಣಮುಖಗೊಂಡು ಬಿಡುಗಡೆಗೊಂಡಿದ್ದಾರೆ. ಚಿಕ್ಕಬಳ್ಳಾಪುರ 12, ಬಾಗೇಪಲ್ಲಿ 4, ಚಿಂತಾಮಣಿ 3, ಗೌರಿಬಿದನೂರು 11, ಗುಡಿಬಂಡೆ 4, ಶಿಡ್ಲಘಟ್ಟ 7 ಸೋಂಕಿತರು ದೃಢಪಟ್ಟಿದ್ದು, ಜಿಲ್ಲೆಯಲ್ಲಿ ಒಟ್ಟು ಸಂಖ್ಯೆ 11,186 ಕ್ಕೆ ಏರಿಕೆಯಾಗಿದೆ.
ಇನ್ನು ಚಿಕ್ಕಬಳ್ಳಾಪುರ 43, ಬಾಗೇಪಲ್ಲಿ 55, ಚಿಂತಾಮಣಿ 36, ಗೌರಿಬಿದನೂರು 55, ಗುಡಿಬಂಡೆ 6, ಶಿಡ್ಲಘಟ್ಟ 49 ಸೋಂಕಿತರು ಸಂಪೂರ್ಣ ಗುಣಮುಖಗೊಂಡಿದ್ದು, ಜಿಲ್ಲೆಯಲ್ಲಿ ಒಟ್ಟು ಗುಣಮುಖರಾದವರ ಸಂಖ್ಯೆ 10,720 ಕ್ಕೆ ಏರಿಕೆಯಾಗಿದೆ.
ಚಾಮರಾಜನಗರ: ಜಿಲ್ಲೆಯಲ್ಲಿಂದು 26 ಜನರಿಗೆ ಕೊರೊನಾ ಸೋಂಕು ತಗುಲುವ ಮೂಲಕ ಸೋಂಕಿತರ ಸಂಖ್ಯೆ 5910ಕ್ಕೆ ಏರಿಕೆಯಾಗಿದೆ.
ಇಂದು 90 ಮಂದಿ ಗುಣಮುಖರಾಗುವ ಮೂಲಕ ಸಕ್ರಿಯ ಪ್ರಕರಣಗಳ ಸಂಖ್ಯೆ 228ಕ್ಕೆ ಇಳಿಕೆಯಾಗಿದೆ. 45 ಮಂದಿ ಸೋಂಕಿತರು ಐಸಿಯುನಲ್ಲಿದ್ದು, 121 ಮಂದಿ ಹೋಂ ಐಸೋಲೇಷನ್ ನಲ್ಲಿದ್ದಾರೆ. 312 ಮಂದಿ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಿತರ ಮೇಲೆ ಆರೋಗ್ಯ ಇಲಾಖೆ ನಿಗಾ ಇಟ್ಟಿದೆ. ಜಿಲ್ಲೆಯ ಒಟ್ಟು ಪರೀಕ್ಷೆಗಳ ಸಂಖ್ಯೆ 92 ಸಾವಿರ ದಾಟಿದೆ.