ಚಾಮರಾಜನಗರ: ದಿನದಿಂದ ದಿನಕ್ಕೆ ಮಹಾಮಾರಿ ಹೆಚ್ಚಾಗುತ್ತಿದ್ದು, ಸೋಮವಾರ ಬರೋಬ್ಬರಿ 669 ಮಂದಿಗೆ ಸೋಂಕು ದೃಢಪಟ್ಟಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 4572ಕ್ಕೆ ಏರಿಕೆಯಾಗಿದೆ.
ನಿನ್ನೆ 611 ಮಂದಿ ಗುಣಮುಖರಾಗಿದ್ದಾರೆ. 50 ಮಂದಿ ಐಸಿಯುನಲ್ಲಿದ್ದು 3256 ಮಂದಿ ಹೋಂ ಐಸೋಲೇಷನ್ನಲ್ಲಿದ್ದಾರೆ. 8028 ಮಂದಿ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಿತರ ಮೇಲೆ ಆರೋಗ್ಯ ಇಲಾಖೆ ನಿಗಾ ಇಟ್ಟಿದೆ.
8 ಮಂದಿ ಸಾವು: ಕೊರೊನಾ ಸೋಂಕಿತರ ಸಾವಿನ ಸರಣಿ ಮುಂದುವರೆದಿದ್ದು ಇಂದು 8 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಕೊರೊನಾ ಸೋಂಕಿತರ ಸಾವಿನ ಸಂಖ್ಯೆ 245ಕ್ಕೆ ಏರಿಕೆಯಾಗಿದೆ.