ಚಾಮರಾಜನಗರ: ರಾಷ್ಟ್ರೀಯ ಹೆದ್ದಾರಿ ಇಕ್ಕೆಲಗಳಲ್ಲಿ ಸೂರ್ಯಕಾಂತಿ ಫಸಲು ನಳನಳಿಸುತ್ತಿದ್ದು ಹೂವಿನ ಚಂದಕ್ಕೆ ಪ್ರವಾಸಿಗರು ಮಾರು ಹೋಗಿ ಸೆಲ್ಫಿ ತೆಗೆಯಲು ತೋಟಕ್ಕೆ ಧಾವಿಸುತ್ತಿದ್ದಾರೆ.
ಗುಂಡ್ಲುಪೇಟೆ ತಾಲೂಕಿನ ಹಂಗಳ ಮತ್ತು ಭೀಮನಭೀಡು, ಕಣ್ಣೇಗಾಲ ಮಧ್ಯೆ ಹಾದು ಹೋಗುವ ಎರಡು ರಾಷ್ಟ್ರೀಯ ಹೆದ್ದಾರಿಗಳಲ್ಲಿ ಕೇರಳ, ತಮಿಳುನಾಡಿನ ಪ್ರವಾಸಿಗರರು ಸೂರ್ಯಕಾಂತಿ ಜಮೀನಿಗೆ ಭೇಟಿ ನೀಡಿ ಫೋಟೋ ಕ್ಲಿಕ್ಕಿಸಿಕೊಳ್ಳುತ್ತಿದ್ದಾರೆ.
ಪ್ರವಾಸಿಗರ ಸೆಲ್ಫಿ ಸಂಭ್ರಮಕ್ಕೆ ಕೆಲ ಜಮೀನು ಮಾಲೀಕರು ತೊಂದರೆ ಅನುಭವಿಸಿದರೇ ಮತ್ತೆ ಕೆಲವರು ಹರ್ಷ ವ್ಯಕ್ತಪಡಿಸಿದ್ದಾರೆ. ಆದರೆ, ಗಿಡಗಳನ್ನು ತುಳಿದು ಹಾಳು ಮಾಡಬೇಡಿ, ಹೂವುಗಳನ್ನು ಕೀಳಬೇಡಿ ಎಂದು ಕೆಲ ರೈತರು ಮನವಿ ಮಾಡಿಕೊಳ್ಳುತ್ತಿದ್ದಾರೆ.
ಇನ್ನೂ ಪ್ರವಾಸಿಗರು ಫೋಟೋಗಳನ್ನು ತೆಗೆದು ಸೋಷಿಯಲ್ ಮೀಡಿಯಾ, ಸ್ನೇಹಿತರಿಗೆ ಹಂಚಿಕೊಂಡು ಖುಷಿ ಪಡುತ್ತಿದ್ದಾರೆ. ಸಾಮಾನ್ಯವಾಗಿ ಸೂರ್ಯಕಾಂತಿ ಬಿತ್ತನೆಯನ್ನು ಗುಂಡ್ಲುಪೇಟೆಯಲ್ಲಿ ಹೆಚ್ಚಾಗಿ ಬೆಳೆಯುವುದರಿಂದ ನೆರೆ ರಾಜ್ಯದ ಪ್ರವಾಸಿಗರಿಗೆ ಇದು ವಿಶೇಷವಾಗಿದೆ.
ತಮಿಳುನಾಡು ಮತ್ತು ಕೇರಳ ರಾಜ್ಯಗಳಲ್ಲಿ ಸೂರ್ಯಕಾಂತಿ ಬೆಳೆಯನ್ನು ಬೆಳೆಯುವುದಿಲ್ಲ ಈ ನಿಟ್ಟಿನಲ್ಲಿ ರೈತರ ಜಮೀನುಗಳು ಪ್ರವಾಸಿಗರ ಆಕರ್ಷಣೆ ಕೇಂದ್ರ ಬಿಂದುವಾಗಿ ಮಾರ್ಪಟ್ಟಿವೆ.
ಇದನ್ನೂ ಓದಿ: ಧಾರಾಕಾರ ಮಳೆ: ರಾಜ್ಯದ ಜಲಾಶಯಗಳಲ್ಲಿ ನೀರಿನ ಸಂಗ್ರಹದ ಸದ್ಯದ ಮಾಹಿತಿ