ETV Bharat / state

ಶಿವನಸಮುದ್ರದ ವೆಸ್ಲಿ ಸೇತುವೆ ಬಳಿ ಪ್ರವಾಸಿಗರ ಅಪಾಯಕಾರಿ ಮೋಜು ಮಸ್ತಿ - ವೆಸ್ಲಿ ಸೇತುವೆ

ಶಿವನಸಮುದ್ರದ ವೆಸ್ಲಿ ಸೇತುವೆ ಬಳಿ ಅಪಾಯವನ್ನು ಲೆಕ್ಕಿಸದೆ ಪ್ರವಾಸಿಗರು ಮೋಜು ಮಸ್ತಿಯಲ್ಲಿ ತೊಡಗಿದ್ದು, ಇದಕ್ಕೆ ಸಂಬಂಧಿಸಿದ ಅಧಿಕಾರಿಗಳು ಕಡಿವಾಣ ಹಾಕಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.

tourists dangerous fun in wesley bridge
ವೆಸ್ಲಿ ಸೇತುವೆ ಬಳಿ ಪ್ರವಾಸಿಗರ ಡೇಂಜರಸ್ ಮೋಜು ಮಸ್ತಿ
author img

By

Published : Nov 28, 2022, 12:30 PM IST

ಚಾಮರಾಜನಗರ: ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಶಿವನಸಮುದ್ರದ ವೆಸ್ಲಿ ಸೇತುವೆ ಬಳಿ ಅಪಾಯವನ್ನು ಲೆಕ್ಕಿಸದೆ ಪ್ರವಾಸಿಗರು ಮೋಜು ಮಸ್ತಿಯಲ್ಲಿ ತೊಡಗಿದ್ದಾರೆ.

ಮಳೆಯ ಆರ್ಭಟಕ್ಕೆ ಎರಡು ವರ್ಷಗಳ ಹಿಂದೆಯೇ ಸೇತುವೆಯ ಒಂದು ಭಾಗ ಕೊಚ್ಚಿ ಹೋಗಿತ್ತು‌. ಉಳಿದ ಭಾಗದ ಮೇಲೆ ಓಡಾಟಕ್ಕೆ ನಿರ್ಬಂಧವಿದ್ದರೂ ಇದನ್ನು ಲೆಕ್ಕಿಸದೆ ನೂರಾರು ಸಂಖ್ಯೆಯಲ್ಲಿ ಪ್ರವಾಸಿಗರು ಮೋಜು ಮಾಡುತ್ತಿದ್ದಾರೆ. ಪ್ರವಾಸಿ ಸ್ಥಳಗಳಲ್ಲಿ ತಾಲೂಕು ಆಡಳಿತ ಎಚ್ಚರಿಕೆ ಫಲಕ ಹಾಕಿದ್ದರೂ ನಿರ್ಲಕ್ಷಿಸಿ ನೀರಿಗಿಳಿಯುತ್ತಿದ್ದಾರೆ.

ವೆಸ್ಲಿ ಸೇತುವೆ ಬಳಿ ಪ್ರವಾಸಿಗರ ಡೇಂಜರಸ್ ಮೋಜು ಮಸ್ತಿ

ಇದನ್ನೂ ಓದಿ: ಅಪಾಯ ಮಟ್ಟ ಮೀರಿ ಹರಿಯುತ್ತಿರುವ ಕಾವೇರಿ ನದಿಯಲ್ಲಿ ಪ್ರವಾಸಿಗರ ಹುಚ್ಚಾಟ

ಹೊರ ಜಿಲ್ಲೆಗಳಿಂದ ಭರಚುಕ್ಕಿ ಜಲಪಾತ ವೀಕ್ಷಣೆಗೆ ಆಗಮಿಸಿದ ಪ್ರವಾಸಿಗರು ವೆಸ್ಲಿ ಸೇತುವೆ ಕೆಳಗಡೆ ನೀರಿನಲ್ಲಿ ಆಟವಾಡಲು ಹೋಗುತ್ತಾರೆ. ಅಲ್ಲಿಯೇ ಮದ್ಯಪಾನ ಮಾಡಿ ಈಜಲು ತೆರಳುವುದು ಕೂಡ ನಡೆಯುತ್ತಿದೆ. ಇದಕ್ಕೂ ಕಡಿವಾಣ ಹಾಕಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.