ಚಾಮರಾಜನಗರ: ಸ್ನೇಹಿತರೊಂದಿಗೆ ಪ್ರವಾಸಕ್ಕೆ ತೆರಳಿದ್ದ ವೇಳೆ ಹೊಗೆನಕಲ್ ಜಲಪಾತದಲ್ಲಿ ಕಾಲುಜಾರಿ ಬಿದ್ದು ಯುವಕನೋರ್ವ ಮೃತಪಟ್ಟಿದ್ದಾನೆ.
ನಂಜನಗೂಡು ತಾಲೂಕು ಸಿಂಧುವಳ್ಳಿ ಗ್ರಾಮದ ಶಿವುಪಟೇಲ್ ಮೃತ ಯುವಕ. ವೀಕೆಂಡ್ ಮೋಜಿಗೆ ಹೊಗೆನಕಲ್ ಜಲಪಾತಕ್ಕೆ ತೆರಳಿದ್ದ ವೇಳೆ ಕಾಲುಜಾರಿ ಬಿದ್ದಿದ್ದು, ರಕ್ಷಿಸುವಷ್ಟರಲ್ಲೇ ಪ್ರಾಣಪಕ್ಷಿ ಹಾರಿಹೋಗಿತ್ತು ಎಂದು ತಿಳಿದುಬಂದಿದೆ.
ಯುವಕನ ಮರಣೋತ್ತರ ಪರೀಕ್ಷೆ ನಡೆಸಿ ಮೃತದೇಹವನ್ನು ವಾರಸುದಾರರಿಗೆ ಒಪ್ಪಿಸಲಾಗಿದೆ. ಮಲೆಮಹದೇಶ್ವರ ಬೆಟ್ಟದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.