ಚಾಮರಾಜನಗರ: ನನಗೆ ಸಚಿವರು ಹೊಡೆದಿಲ್ಲ, ಭಾವುಕಳಾದಾಗ ನನ್ನನ್ನು ಸಮಾಧಾನಪಡಿಸಿದರು ಎಂದು ಕೆಂಪಮ್ಮ ಹೇಳಿದರು.
ಸಚಿವರ ಕಪಾಳಮೋಕ್ಷ ಪ್ರಕರಣ ಸಂಬಂಧಿಸಿದಂತೆ ವ್ಯಾಪಕ ಟೀಕೆ ವ್ಯಕ್ತವಾಗಿತ್ತು. ಇದಾದ ನಂತರ ಬಿಜೆಪಿ ಯುವ ಮುಖಂಡ ಪ್ರಣಯ್ ಎಂಬವರ ಜೊತೆ ವಿಡಿಯೋಗೆ ಪ್ರತಿಕ್ರಿಯಿಸಿರುವ ಮಹಿಳೆ, ಪದೇ ಪದೆ ಸಚಿವರ ಕಾಲಿಗೆ ನಮಸ್ಕರಿಸುತ್ತಿದ್ದಾಗ ಬೇಡ ಎಂದು ತಿಳಿಸಿದರು. ಆ ಸಂದರ್ಭದಲ್ಲಿ ಸ್ವಲ್ಪ ಹೊತ್ತು ಭಾವುಕಳಾದೆ. ತಕ್ಷಣ ಸಚಿವರು ನನ್ನನ್ನು ಸಮಾಧಾನಪಡಿಸಿ, ನಿನಗೆ ವಸತಿ ಕಲ್ಪಿಸಿ ಕೊಡುವುದಾಗಿ ಹೇಳಿದರು. ಅವರು ನನಗೆ ಒಳ್ಳೆಯದು ಮಾಡಿದ್ದಾರೆಯೇ ಹೊರತು ಕೆಟ್ಟದು ಮಾಡಿಲ್ಲ ಎಂದು ಹೇಳಿಕೆ ಕೊಟ್ಟರು.
ಇದನ್ನೂ ಓದಿ: ಸಮಸ್ಯೆ ಹೇಳಿಕೊಳ್ಳಲು ಬಂದ ಮಹಿಳೆಗೆ ಕಪಾಳಮೋಕ್ಷ ಮಾಡಿದ ಸಚಿವ ವಿ. ಸೋಮಣ್ಣ