ಚಾಮರಾಜನಗರ: ಕಾರು ಮತ್ತು ಬೈಕ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಮೃತಪಟ್ಟಿರುವ ಘಟನೆ ಚಾಮರಾಜನಗರ ತಾಲೂಕಿನ ಬದನಗುಪ್ಪೆ-ಮುತ್ತಿಗೆ ಗ್ರಾಮದಲ್ಲಿ ಸಂಭವಿಸಿದೆ.
ಚಾಮರಾಜನಗರ ತಾಲೂಕಿನ ಬೇಡರಪುರ ಗ್ರಾಮದ ಅಶೋಕ್ (32) ಹಾಗೂ ಮಹೇಶ್ (25) ಮೃತಪಟ್ಟವರು. ನಂಜನಗೂಡಿನಿಂದ ಹೊರಟಿದ್ದ ಬೈಕ್ಗೆ ಎದುರಿನಿಂದ ವೇಗವಾಗಿ ಬರುತ್ತಿದ್ದ ಕಾರು ಡಿಕ್ಕಿ ಹೊಡೆದಿದ್ದು, ಪರಿಣಾಮ ಸ್ಥಳದಲ್ಲೇ ಇಬ್ಬರು ಅಸುನೀಗಿದ್ದಾರೆ.
ಚಾಲಕನನ್ನು ಗ್ರಾಮಾಂತರ ಠಾಣೆ ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ. ಚಾಮರಾಜನಗರ ಜಿಲ್ಲಾಸ್ಪತ್ರೆಗೆ ಶವಗಳನ್ನು ರವಾನಿಸಲಾಗಿದೆ.
ಇದನ್ನೂ ಓದಿ: 32 ವರ್ಷದ ಮಹಿಳೆಯ ಮೇಲೆ ಅತ್ಯಾಚಾರ, ಕೊಲೆ: ಪ್ರಕರಣದಲ್ಲಿ ಅಪ್ರಾಪ್ತನೇ ಆರೋಪಿ